


ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಹಾಕಿರುವ ಹಲವು ಚಯರ್ ಗಳು ಮುರಿದು ಬಿದ್ದು ಕಬ್ಬಿಣದ ರಾಡ್ ಮಾತ್ರ ಉಳಿದುಕೊಂಡಿತ್ತು. ಇದರಿಂದ ಪ್ರಯಾಣಿಕರು ಸಂಕಟ ಅನುಭವಿಸುತ್ತಿರುವ ಬಗ್ಗೆ ಅಮರ ಸುದ್ದಿ ವೆಬ್ಸೈಟ್ ನಲ್ಲಿ ಫೆ. 14 ರಂದು ವರದಿ ಪ್ರಕಟಿಸಿ ಅಧಿಕಾರಿಗಳನ್ನು ಎಚ್ಚರಿಸಿತ್ತು.
ವಾರದೊಳಗೆ ಸರಿಪಡಿಸುವ ಭರವಸೆ ನೀಡಿದ್ದ ಅಧಿಕಾರಿಗಳು ಫೆ.17 ರಂದು ಚಯರ್ ದುರಸ್ತಿ ಮಾಡಲು ಕ್ರಮ ಕೈಗೊಂಡಿದ್ದಾರೆ.