ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯದ ಸುಬ್ರಹ್ಮಣ್ಯ ಕಾರ್ಯಕ್ಷೇತ್ರದಲ್ಲಿ ಫೆ.18 ರಂದು ಡಿಜಿಟಲ್ ಸೇವಾ ಕೇಂದ್ರವನ್ನು ಉದ್ಘಾಟಿಸಲಾಯಿತು.
ಡಿಜಿಟಲ್ ಸೇವಾ ಕೇಂದ್ರವನ್ನು ಬಳ್ಪ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಕಾರ್ಯದರ್ಶಿಯಾದ ಮೋನಪ್ಪ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಜನಜಾಗೃತಿ ವೇದಿಕೆಯ ನಿಕಟಪೂರ್ವ ಅದ್ಯಕ್ಷರು ಹಾಗೂ ಹಾಲಿ ಸದಸ್ಯರಾದ ವಿಮಲಾ ರಂಗಯ್ಯ ಅವರು ಲ್ಯಾಪ್ ಟಾಪ್ ಹಸ್ತಾಂತರ ಮಾಡಿ ಗ್ರಾಮಾಭಿವೃದ್ಧಿ ಯೋಜನೆಯ ಇಂತಹ ಕಾರ್ಯಕ್ರಮ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್ ಈ ಡಿಜಿಟಲ್ ಸೇವಾ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಸವಿತಾ ಭಟ್, ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ದಿವ್ಯಾ, ಒಕ್ಕೂಟದ ಅಧ್ಯಕ್ಷರಾದ ತೇಜ ಕುಮಾರ್, ಮೋನಪ್ಪ, ಶ್ರೀಮತಿ ಶೈಲಜಾ, ಗ್ರಂಥಪಾಲಕಿ ಲಲಿತಾ, ಸೇವಾಪ್ರತಿನಿಧಿ ಶ್ರೀಮತಿ ಹರಿಣಾಕ್ಷಿ, ಉಮಾವತಿ, ಗುರು ಪ್ರಸಾದ್ ಹಾಗೂ ಸಂಘದ ಪದಾಧಿಕಾರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ