
ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ ಗ್ರಾಮಿಣ ಅಭಿವೃದ್ಧಿ ಸಚಿವ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಫೆ. 21 ರಂದು ಬೆಳಗ್ಗೆ 10 ಗಂಟೆಗೆ ಖಾಸಗಿ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಪಕ್ಷದ ಧ್ವಜ ಹಾಗೂ ರಾಷ್ಟ್ರ ಧ್ವಜ ಹಿಡಿದು ಪ್ರತಿಭಟನೆಯನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಮಾಡಲಿದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಿ.ಸಿ ಜಯರಾಮ್ ಹೇಳಿದರು.
ಅವರು ಫೆ.19 ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿ, ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜದ ಬದಲು ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಪತ್ರಿಕಾ ಮಾಧ್ಯಮದಲ್ಲಿ ಹೇಳಿದ ಮಾತನ್ನು ಈಶ್ವರಪ್ಪ ಹಿಂದಕ್ಕೆ ತೆಗೆದುಕೊಳ್ಳುವವರೆಗೆ ಹೋರಾಟವನ್ನು ಮಾಡುತ್ತೇವೆ ಎಂದರು. ಪಿ.ಎಸ್ ಗಂಗಾಧರ ಸ್ವಾಗತಿಸಿದರು. ಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ ಶಶಿಧರ, ಮಾಧ್ಯಮ ಸಂಯೋಜಕ ಭವಾನಿಶಂಕರ ಕಲ್ಮಡ್ಕ, ನಂದರಾಜ್ ಸಂಕೇಶ, ಹಾಗೂ ನಾರಾಯಣ ಟೈಲರ್ ಉಬರಡ್ಕ ಉಪಸ್ಥಿತರಿದ್ದರು.