- Wednesday
- April 2nd, 2025

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ 22 ರವರೆಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿ ಉಚ್ಚಿಲ ಇವರ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ನಡೆಯಿತು.ಫೆ.20 ರಂದು ಬೆಳಿಗ್ಗೆ 9:00 ಗಂಟೆಯಿಂದ ಹಸಿರು ಕಾಣಿಕೆ ಪ್ರಾರಂಭ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 12:30 ರಿಂದ ಅನ್ನಸಂತರ್ಪಣೆ, ಸಾಯಂಕಾಲ ತಂತ್ರಿಗಳ ಆಗಮನ,...

ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಫೆ.20 ರಂದು ಹತ್ಯೆಗೀಡಾದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾದ ಕೇಶವ ಅಡ್ತಲೆ ಮತ್ತು ಶ್ರೀಮತಿ ಮಾಲಿನಿ ವಿನೋದ್ ಕುಮಾರ್ ಉಳುವಾರು ಮಲ್ಲಡ್ಕ ಇವರು ತಮ್ಮ ಎರಡು ತಿಂಗಳ ಗೌರವಧನ ನೀಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ದೇವಚಳ್ಳ ಗ್ರಾಮದ ತಳೂರು ಹಲಸಿನಡ್ಕ ಬಾಬು ಮಡಿವಾಳ ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಫೆ.19 ರಂದು ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ಹಲವಾರು ವರ್ಷಗಳಿಂದ ಗ್ರಾಮದ ದೈವ ಹಾಗೂ ದೇವರ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪುತ್ರರಾದ ಪದ್ಮನಾಭ, ತೀರ್ಥರಾಮ, ಪುತ್ರಿ ಭಾರ್ಗವಿ, ಅಳಿಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಕರ್ನಾಟಕ ಸರಕಾರದ ಮೀನುಗಾರಿಕಾ ಇಲಾಖೆಯ ನೇತೃತ್ವದಲ್ಲಿ ಫೆ. 11 ರಂದು ಮೀನುಗಾರಿಕಾ ಸಚಿವರಾದ ಎಸ್. ಅಂಗಾರರವರ ಸುಳ್ಯದ ಕಛೇರಿಯಲ್ಲಿ ನಡೆದ ಸಭೆಯಲ್ಲಿ "ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪೆನಿ ಲಿಮಿಟೆಡ್” ಇದರ ನೂತನ ಆಡಳಿತ ಮಂಡಳಿಯ ರಚನೆ ನಡೆಯಿತು. ಅಧ್ಯಕ್ಷ,ಉಪಾಧ್ಯಕ್ಷ ಹಾಗೂ ನಿರ್ದೇಶಕರುಗಳಾಗಿ 11 ಜನರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಮಹೇಶ್ ಕುಮಾರ್ ಮೇನಾಲ, ಉಪಾಧ್ಯಕ್ಷರಾಗಿ...