ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ 22 ರವರೆಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿ ಉಚ್ಚಿಲ ಇವರ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ನಡೆಯಿತು.
ಫೆ.20 ರಂದು ಬೆಳಿಗ್ಗೆ 9:00 ಗಂಟೆಯಿಂದ ಹಸಿರು ಕಾಣಿಕೆ ಪ್ರಾರಂಭ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 12:30 ರಿಂದ ಅನ್ನಸಂತರ್ಪಣೆ, ಸಾಯಂಕಾಲ ತಂತ್ರಿಗಳ ಆಗಮನ, ರಾತ್ರಿ 8:00 ಗಂಟೆಗೆ ಮಹಾಪೂಜೆ, ರಾತ್ರಿ 8:15 ರಿಂದ ಅನ್ನಸಂತರ್ಪಣೆ ನಡೆಯಿತು.
ಹಾಗೂ ಸಂಜೆ 6:00 ಗಂಟೆಯಿಂದ 8:30 ರವರೆಗೆ ಬ್ರಹ್ಮಕುಮಾರಿ ಸಂಸ್ಥೆ ಸುಳ್ಯ ಆಯೋಜನೆಯ ಮಹಿಳಾ ತಂಡದವರಿಂದ ಶಿವ ಅವತಾರ ಯಕ್ಷಗಾನ ತಾಳಮದ್ದಳೆ ನಡೆಯಿತು.
ನಂತರ ರಾತ್ರಿ 8:30 ರಿಂದ 9:15 ರವರೆಗೆ ವಸಂತ ಆಚಾರ್ಯ ಸಾರಥ್ಯದ ಫ್ಯೂಶನ್ ಇನ್ಸ್ಟಿಟ್ಯೂಟ್ ಆಫ್ ಡ್ಯಾನ್ಸ್-ಕಟ್ಟ ವಿದ್ಯಾರ್ಥಿಗಳಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಫ್ಯೂಶನ್ ತಂಡದ ಪಾಲುದಾರರಾದ ವಸಂತ ಕಾಯರ್ತೋಡಿ ಅವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.
ನಂತರ ರಾತ್ರಿ 9:15 ರಿಂದ 11:15 ರವರೆಗೆ ಲಾಸ್ಯ ಕಲಾ ಶಾಲೆ ಗುತ್ತಿಗಾರು ಹಾಗೂ ಕ್ರೇಜಿಗೈಸ್ ಬೆಳ್ಳಾರೆ ಇವರಿಂದ ನೃತ್ಯಾರ್ಪಣಂ ಕಾರ್ಯಕ್ರಮ ನಡೆಯಿತು.
ನಂತರ ರಾತ್ರಿ 11:30 ರಿಂದ ಕುಮಾರಿ ಬ್ರಾಹ್ಮಿ ಬಳಕ್ಕಜೆ ಇವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.
ಫೆ.21 ರಂದು ಬೆಳಿಗ್ಗೆ 6:00 ಗಂಟೆಯಿಂದ ಗಣಪತಿ ಹವನ, ಕಲಶಪೂಜೆ, ಕಲಶಾಭಿಷೇಕ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.
ನಂತರ ಸಾಯಂಕಾಲ 6:30 ಕ್ಕೆ ದೀಪಾರಾಧನೆ, ಚೆಂಡೆವಾದನ, ರಾತ್ರಿ 7:30 ಕ್ಕೆ ಮಹಾಪೂಜೆ, ರಾತ್ರಿ 8:00 ಗಂಟೆಯಿಂದ ದೇವರ ಬಲಿ ಉತ್ಸವ ಹೊರಡುವುದು, ವಸಂತ ಕಟ್ಟೆ ಪೂಜೆ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ನಡೆಯಿತು.
ಹಾಗೂ ಬೆಳಿಗ್ಗೆ 6:00 ಗಂಟೆಯಿಂದ ಸಂಜೆ 6:00 ಗಂಟೆವರೆಗೆ ವಿವಿಧ ಭಜನಾ ತಂಡಗಳಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ ನಡೆಯಿತು.
ನಂತರ ಸಂಜೆ 6:00 ಗಂಟೆಯಿಂದ ಬಾಲಚಂದ್ರ ಪೆರಾಜೆ ಇವರಿಂದ ಸ್ಯಾಕ್ಸೋಫೋನ್ ಕಾರ್ಯಕ್ರಮ ನಡೆಯಿತು.
ಫೆ.22 ರಂದು ಬೆಳಿಗ್ಗೆ 6:00 ಗಂಟೆಯಿಂದ ಸಾಯಂಕಾಲದ ತನಕ ಉಳ್ಳಾಗುಲು ಮತ್ತು ಪರಿವಾರ ದೈವಗಳ ನೇಮೋತ್ಸವ ನಡೆದು ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಸಂಪನ್ನಗೊಂಡಿತು.
ವರದಿ :- ಉಲ್ಲಾಸ್ ಕಜ್ಜೋಡಿ