
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಪ್ಲೇಸ್ಮೆಂಟ್ ಮತ್ತು ಕೆರಿಯರ್ ಗೈಡೆನ್ಸ್ ಸೆಲ್ ವತಿಯಿಂದ ಸಂದರ್ಶನ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಬೆಂಗಳೂರಿನ ಜಿಲೆಟ್ ಕಂಪೆನಿಯ ಪುನೀತ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ
ವಿದ್ಯಾರ್ಥಿಗಳಿಗೆ ಸಂದರ್ಶನ ಕೌಶಲ್ಯದ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂತಿಮ ಬಿಬಿಎ ವಿದ್ಯಾರ್ಥಿನಿ ದೀಕ್ಷಾ ಸ್ವಾಗತಿಸಿ ಪ್ಲೇಸ್ಮೆಂಟ್ ಸೆಲ್ ನ ಸಂಚಾಲಕ ವಿಷ್ಣು ಪ್ರಶಾಂತ್ ವಂದಿಸಿದರು. ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರ ಪದ್ಮನಾಭ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಅಧ್ಯಾಪಕ ಅಧ್ಯಾಪಕೇತರ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು