
ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.01ರಂದು ಮಹಾಶಿವರಾತ್ರಿ ಉತ್ಸವ ನಡೆಯಲಿದ್ದು ಈ ಪ್ರಯುಕ್ತ ದೇವಳದಲ್ಲಿ ಸಂಜೆ ಗಂಟೆ 5.00ರಿಂದ ಶತರುದ್ರಾಭಿಷೇಕ, ರಾತ್ರಿ ಗಂಟೆ 9.30ಕ್ಕೆ ಮಹಾಪೂಜೆ ನಡೆಯಲಿರುವುದು. ನಂತರ ರಾತ್ರಿ ಗಂಟೆ 10.00ರಿಂದ ಅಮ್ಮ ಕಲಾವಿದರು ಕುಡ್ಲ ಅಭಿನಯಿಸುವ ಶಿವಾನಂದ ಶೆಟ್ಟಿ ಸಾರಥ್ಯದ ಕುಸಲ್ದರಸೆ ನವೀನ್.ಡಿ ಪಡೀಲ್ ಇವರ ಸಲಹೆ ಸಹಕಾರದೊಂದಿಗೆ ಸೋಮನಾಥ ಶೆಟ್ಟಿ ಮಂಗಲ್ಪಾಡಿ ರಚಿಸಿ ರಂಗ್ ದ ರಾಜೆ ಸುಂದರ್ ರೈ ಮಂದಾರ ನಿರ್ದೇಶಿಸಿ, ಅಭಿನಯಿಸುವ “ಪರಕೆ ಪೂವಕ್ಕೆ” ಎಂಬ ತುಳು ಹಾಸ್ಯಮಯ ನಾಟಕ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಭಾಗಿಗಳಾಗುವಂತೆ ದೇವಸ್ಥಾನದ ಆಡಳಿತಾಧಿಕಾರಿಗಳು ವಿನಂತಿಸಿದ್ದಾರೆ.