

ಬದುಕಿಗೆ ಶಿಕ್ಷಣ ಒಂದು ಆಧಾರ, ಹಾಗಾಗಿ ಜ್ಞಾನ ಪಡೆಯುವಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದು ಬಹಳ ಮುಖ್ಯವಾದ ಸಂಗಾತಿಯಾಗಿದೆ. ಆದರೆ ಇತ್ತೀಚೆಗೆ ಸ್ಪಷ್ಟ ಶಿಕ್ಷಣ ನೀತಿ ಇಲ್ಲದೆ ಇರುವುದರಿಂದ ಅನೇಕ ಗೊಂದಲಗಳನ್ನು ಕಾಣುತ್ತಿದೆ. ಕೇಂದ್ರ ಸರ್ಕಾರ ದೇಶದ ಅಭಿವೃದ್ಧಿ ಹಾಗೂ ಸ್ವ ಉದ್ಯೋಗ ಕಾಣುವ ನಿಟ್ಟಿನಲ್ಲಿ ಅನುದಾನ ಮಂಜೂರು ಮಾಡುತ್ತಿದ್ದು ಅದರಲ್ಲಿ ಶಿಕ್ಷಣ ವ್ಯವಸ್ಥೆಯು ಸೇರಿದೆ ಎಂದು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹೇಳಿದರು.
ಅವರು ಫೆ.26 ರಂದು ನಡೆದ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನ ಎರಡು ವಿಸ್ತ್ರತ ಕಟ್ಟಡಗಳ ಉದ್ಘಾಟಿಸಿ ಮಾತನಾಡಿ ಶುಭ ಹಾರೈಸಿದರು.
ಸರ್ಕಾರಿ ಶಾಲೆಗಳಿಗೆ ಉತ್ತಮವಾದ ಕ್ರೀಡಾಂಗಣದ ಅವಶ್ಯಕತೆ ಇದ್ದುದ್ದರಿಂದ ಆ ಕೆಲಸವನ್ನು ಆದಷ್ಟು ಬೇಗ ಮುಗಿಸಲಿದ್ದೇವೆ. ಅಲ್ಲದೇ ಶಾಲೆಗೆಂದು ಮಂಜೂರಾದ ಸ್ಥಳಗಳು ಯಾರ ಸ್ವಾಧೀನವಾಗದೆ ಶಾಲೆಗೆ ಅವಶ್ಯಕತೆ ಇರುವಂತಹ ವಿಚಾರಗಳಿಗೆ ಬಳಸಿಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಶಿಕ್ಷಣ ಇಲಾಖೆಯ ಪ.ಪೂ. ಉಪ ನಿರ್ದೇಶಕ ಸಿ.ಡಿ. ಜಯಣ್ಣ, ಸುಳ್ಯ ತಾಲೂಕು ಪಂಚಾಯತ್ ನ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಎನ್ , ಸುಳ್ಯದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಎಸ್ ಸಣ್ಣೇಗೌಡ, ನಗರ ಪಂಚಾಯತ್ ಸದಸ್ಯೆ ಕಿಶೋರಿ ಎಂ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಶೀಲಾ ಕುರುಂಜಿ, ಕಾಲೇಜಿನ ಅಭಿವೃದ್ಧಿ ಸಮಿತಿಯ ಖಜಾಂಚಿ ಲಿಂಗಪ್ಪ ಗೌಡ ಕೇರ್ಪಳ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ್ ಪ್ರಭು, ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಶಂಕರ ಪೆರಾಜೆ, ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಉಪಸ್ಥಿತರಿದ್ದರು. ಶ್ರೀಲಯ, ಸಂಧ್ಯಾ ಪ್ರಾರ್ಥಿಸಿ,ಕಾಲೇಜಿನ ಪ್ರಾಂಶುಪಾಲ ಮೋಹನ ಗೌಡ ಬೊಮ್ಮೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ವಾಣಿಜ್ಯ ವಿಭಾಗದ ಯಶೋದಾ ವಂದಿಸಿದರು. ಸತ್ಯವತಿ ಮತ್ತು ಚಾರ್ಲ್ಸ್ ಡಿಸೋಜ ಕಾರ್ಯಕ್ರಮವನ್ನು ನಿರೂಪಿಸಿದರು.