ಹರಿಹರ ಪಲ್ಲತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಸೆ.27 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಪಲ್ಸ್ ಪೋಲಿಯೋ ಲಸಿಕೆ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು.
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಗಣ ಅವರು ತೀಕ್ಷಾ ಎಂಬ ಮಗುವಿಗೆ 2 ಹನಿ ಪೋಲಿಯೋ ಲಸಿಕೆ ಹಾಕುವ ಮುಖಾಂತರ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯದ ಹಿರಿಯ ಪ್ರಾಥಮಿಕ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜು ಚಕ್ರದ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಸುಪ್ರಿತಾ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಹರಿಣಿ, ಆಶಾ ಕಾರ್ಯಕರ್ತೆ ಶ್ರೀಮತಿ ಪುಷ್ಪಾವತಿ, ಗ್ರಂಥಪಾಲಕಿ ಚಂದ್ರಿಕಾ.ಕೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ