ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಮಾ.01ರಂದು ಮಹಾಶಿವರಾತ್ರಿ ಉತ್ಸವ ನಡೆಯಲಿದ್ದು, ಸಂಜೆ ಗಂಟೆ 6.00ರಿಂದ ಶತರುದ್ರಾಭಿಷೇಕ, ರಂಗಪೂಜೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ನಡೆಯಲಿರುವುದು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 6.00ರಿಂದ ರಾಮ ಜೋಯಿಸ ಬೆಳ್ಳಾರೆಯವರ ಸಂಯೋಜನೆಯಲ್ಲಿ ಪ್ರಸಿದ್ಧ ಭಾಗವತ ಪುತ್ತಿಗೆ ರಘುರಾಮ ಹೊಳ್ಳರ ಭಾಗವತಿಕೆಯಲ್ಲಿ “ಜಾಂಬವತಿ ಕಲ್ಯಾಣ” ಯಕ್ಷಗಾನ ಬಯಲಾಟ ನಡೆಯಲಿದೆ. ಮುಮ್ಮೇಳದಲ್ಲಿ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಾದ ಶಿವರಾಮ ಜೋಗಿ, ನಿಡ್ಲೆ ಗೋವಿಂದ ಭಟ್, ವಾಸುದೇವ ರಂಗ ಭಟ್, ಗೋಪಾಲ್ ಭಟ್ ಗುಂಡಿಮಜಲು, ಶಶಿಕಿರಣ ಕಾವು, ದಿವಾಕರ ರೈ ಸಂಪಾಜೆ ಹಾಗೂ ಸುಬ್ರಹ್ಮಣ್ಯ ಭಟ್ ಪೆರುವೋಡಿ ಇರಲಿದ್ದಾರೆ.
ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಗಳಾಗುವಂತೆ ದೇವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.