ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ರೋಟರಿ ಕ್ಲಬ್ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಸಚಿವ ಎಸ್. ಅಂಗಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಯ ಸ್ಥಾಪಕರದ ಸವಣೂರು ಸೀತಾರಾಮ ರೈ, ರೋಟರಿ ಕ್ಲಬ್ ನ ಅಧ್ಯಕ್ಷ ಭರತ್ ನಾಯರ್, ತಾಲೂಕು ಆರೋಗ್ಯ ಅಧಿಕಾರಿ ಡಾ.ನಂದಕುಮಾರ್ ,
ಡಾ. ಕರುಣಾಕರ, ನಗರ ಪಂಚಾಯತ್ ಮುಖ್ಯ ಅಧಿಕಾರಿ ಸ್ವಾಮಿ, ನಗರ ಪಂಚಾಯತ್ ಸದಸ್ಯೆ ಕಿಶೋರಿ ಶೇಟ್ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಡಾ. ಮನೋಜ್ ಕುಮಾರ್, ಶ್ರೀ. ದಾಮೋದರ ಮಂಚಿ , ಶ್ರೀ. ಕೇಶವ ಮಾಸ್ಟರ್, ಶ್ರೀ. ಸುಬ್ರಹ್ಮಣ್ಯ, ಬಿಜೆಪಿ ಮಂಡಲ ಸೋಶಿಯಲ್ ಮೀಡಿಯಾ ಸಹ ಸಂಚಾಲಕ ಸುಪ್ರೀತ್ ಮೋಂಟಡ್ಕ, ಹಾಗೂ ರೋಟರಿ ಕ್ಲಬ್ ನ ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
- Wednesday
- December 4th, 2024