- Wednesday
- April 2nd, 2025

ಕಡಬದ ಹಳೆನೆರೆಂಕಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ನೂತನ ಪ್ರಾಕಾರ ಹಾಗೂ ಚಂದ್ರಮಂಡಲ ಸಮರ್ಪಣೆ ಹಾಗೂ ವರ್ಷಾವಧಿ ಉತ್ಸವಗಳು ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಸಚಿವರಾದ ಎಸ್.ಅಂಗಾರರವರು ಭೇಟಿ ನೀಡಿದರು. ಆ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮದಲ್ಲಿ ಸಚಿವರೇ ಭಜಕರ ಜೊತೆಗೆ ಕುಳಿತು ಭಜನೆಯನ್ನು ಹಾಡಿದರು. ಆ ಮೂಲಕ ಊರವರ ಮೆಚ್ಚುಗೆಗೆ ಪಾತ್ರರಾದರು.

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಸಮಾಜ ಸೇವಕ ರವಿ ಕಕ್ಯೆಪದವು ಅವರಿಗೆಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ- 2021 ಪ್ರದಾನ ಮಾಡಲಾಯಿತು.ತಣ್ಣೀರುಬಾವಿ ಟ್ರೀ ಪಾರ್ಕ್ ನ ಗೆಸ್ಟ್ ಹೌಸ್ ಬಳಿ ನಡೆದ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ...

ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ ಮಾ.6 ರಂದು ಆಸ್ಪತ್ರೆಯಲ್ಲಿ ನಡೆಯಿತು. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕ ಆಸ್ಪತ್ರೆಯ ಅಭಿವೃದ್ಧಿ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಲಾಯಿತು. ಆಸ್ಪತ್ರೆಯ ಶವಾಗಾರ ಅಭಿವೃದ್ಧಿ ಪಡಿಸಲು ಮತ್ತು ಶವಾಗಾರದಲ್ಲಿ ಶೀತಲೀಕರಣ ಘಟಕ ಸ್ಥಾಪನೆ ಮಾಡಲು...

ನಿಸರ್ಗ ಯುವಕ ಮಂಡಲ ಐನೆಕಿದು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಇವುಗಳ ಸಂಯುಕ್ತಾಶ್ರಯದಲ್ಲಿ ಮಾ.06 ರಂದು ಐನೆಕಿದು ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಈ ಉಚಿತ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತಾ ಗುಂಡಡ್ಕ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ...

ಅರಂತೋಡು ಗ್ರಾಮದ ತೋಟಂಪಾಡಿ ಉಳ್ಳಾಕುಲು ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಮೇ 13,14,15 ರಂದು ನಡೆಸಲು ತೀರ್ಮಾನಿಸಲಾಗಿದೆ. ಇದರ ಅಂಗವಾಗಿ ಮಾ.6 ರಂದು ಅರಂತೋಡಿನ ಸಿರಿ ಸೌಧ ಸಭಾಂಗಣದಲ್ಲಿ ಸಮಾಲೋಚನಾ ನಡೆಯಿತು. ಸಭೆ ಅಧ್ಯಕ್ಷತೆಯನ್ನು ಯು.ಎಸ್. ಮೇದಪ್ಪ ಗೌಡ ವಹಿಸಿದ್ದರು. ಈ ಸಭೆಯಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಸಮಿತಿ ರಚನೆ ಮಾಡಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ...

ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ.04 ರಂದು ಕ್ರೀಡಾಕೂಟ ನಡೆಯಿತು.ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಾಲಸುಬ್ರಮಣ್ಯ ಎನ್.ಜಿ. ಇವರು ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಬೊಳಿಯಮ್ಮ, ಪ್ರಗತಿಪರ ಕೃಷಿಕರಾದ ಕೃಷ್ಣಮೂರ್ತಿ ಕೊಳಗೆ, ಕೊಲ್ಲಮೊಗ್ರು ಗ್ರಾಮ...

ಪಾಲೆಪ್ಪಾಡಿ ಐವರ್ನಾಡು ರಸ್ತೆಯಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ಡಾಮರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ 30 ಲಕ್ಷದಲ್ಲಿ ಕಾಂಕ್ರೀಟಿಕರಣಗೊಂಡ ರಸ್ತೆಯ ಉದ್ಘಾಟನೆ ಕಾರ್ಯಕ್ರಮ ಮಾ.6 ರಂದು ನಡೆಯಿತು. ಬಂದರು,ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷ ಎಸ್. ಎನ್. ಮನ್ಮಥ,...

ಕಟ್ಟಿಂಗ್ ಮೆಷಿನ್ ತಾಗಿ ಮೃತಪಟ್ಟ ಐವರ್ನಾಡು ಗ್ರಾಮದ ನಾಟಿಕೇರಿ ನಿವಾಸಿ ದಯಾನಂದರವರ ಮನೆಗೆ ಸಚಿವ ಎಸ್. ಅಂಗಾರ ಅವರು ಮಾ.06 ರಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಸರಕಾರದಿಂದ ಸಿಗುವ ಪರಿಹಾರ ನೀಡಲು ಶೀಘ್ರ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿ ಬೂಡು – ಬೆಳ್ಳಾರೆಯಲ್ಲಿ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಹಾಗೂ ಸಪರಿವಾರ ದೈವಗಳ ನೇಮೋತ್ಸವವು ಮಾ.14 ಮತ್ತು ಮಾ.15 ರಂದು ನಡೆಯಲಿದ್ದು ಆ ಪ್ರಯುಕ್ತ ಮಾ.5 ರಂದು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು ಆಮಂತ್ರಣ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್...

All posts loaded
No more posts