
ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿರುವ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಸಯಿತು. ಸುಳ್ಯ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸಿಡಿಮದ್ದು ಸಿಡಿಸಿ, ಸಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಮಾತನಾಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ , ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ನಗರ ಪಂಚಾಯತ್ ಸದಸ್ಯರಾದ ಕಿಶೋರಿ ಶೇಟ್, ಬೂಡು ರಾಧಾಕೃಷ್ಣ ರೈ ,ಸುಧಾಕರ, ಬುದ್ಧ ನಾಯ್ಕ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್, ನವೀನ್ ಕುಮಾರ್ ಮೇನಾಲ, ಜಿನ್ನಪ್ಪ ಪೂಜಾರಿ, ಮಹೇಶ್ ಕುಮಾರ್ ಮೇನಾಲ, ಯುವ ಮೋರ್ಚಾ ಮಂಡಲ ಕಾರ್ಯದರ್ಶಿ ಸುನಿಲ್ ಕೇರ್ಪಳ, ಬಿಜೆಪಿ ಮಂಡಲ ಸೋಶಿಯಲ್ ಮೀಡಿಯಾ ಸಹ ಸಂಚಾಲಕ ಸುಪ್ರೀತ್ ಮೋಂಟಡ್ಕ ಮತ್ತಿತರರು ಉಪಸ್ಥಿತರಿದ್ದರು.