ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ಭಕ್ತರೋರ್ವರನ್ನು ಮಠಕ್ಕೆ ಕರೆದುಕೊಂಡು ಹೋಗುವ ವಿಚಾರದಲ್ಲಿ ತಕರಾರು ಉಂಟಾಗಿ ಈ ವಿಚಾರದಲ್ಲಿ ಅವಾಚ್ಯ ಶಬ್ದದಿಂದ ಬೈದು ಜೀವ ಬೆದರಿಕೆ ಒಡ್ಡಿದರೆಂಬ ಆರೋಪದ ಅಡಿಯ ಆರೋಪಿಗಳು ದೋಷಮುಕ್ತಗೊಳಿಸಿ ತೀರ್ಪು ನೀಡಿದ್ದಾರೆ . 2019 ಜೂನ್ 6 ರಂದು ಬಿ. ಎ ಕುಮಾರ್ ಎಂಬುವರು ಸುಳ್ಯ ತಾಲೂಕು ಸುಬ್ರಹ್ಮಣ್ಯ ಗ್ರಾಮದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ಸಂದರ್ಭದಲ್ಲಿ ಆರೋಪಿರುಗಳಾದ ಮಹೇಶ್ ಕರಿಕ್ಕಳ, ಗುರುಪ್ರಸಾದ್ ಪಂಜ ಹಾಗೂ ಪ್ರಶಾಂತ್ ಭಟ್ ಮಾಣಿಲ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಕೆನ್ನೆಗೆ ಹೊಡೆದುದ್ದಲ್ಲದೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪ್ರಕರಣವು ದಾಖಲಾಗಿತ್ತು. ಈ ಪ್ರಕರಣವನ್ನು ತನಿಖೆ ನಡೆಸಿದ ಮಾನ್ಯ ಸಿವಿಲ್ ಜಡ್ಜ್ ಹಾಗೂ ಜೆ. ಯಮ್. ಎಫ್. ಸಿ ನ್ಯಾಯಾಲಯ ಇದರ ನ್ಯಾಯಾಧೀಶರಾದ ಯಶವಂತ್ ಕುಮಾರ್ ರವರು ಆರೋಪಿಗಳ ವಿರುದ್ದ ಅಭಿಯೋಜನೆಯು ಮಾಡಿರುವ ಆರೋಪವನ್ನು ಸಾಬೀತುಪಡಿಸಲು ವಿಫಲವಾಗಿದೆ ಎಂಬ ಕಾರಣವನ್ನು ನೀಡಿ ಆರೋಪಿಗಳನ್ನು 2022 ಮಾರ್ಚ್ 9 ರಂದು ದೋಷಮುಕ್ತಗೊಳಿಸಿ ತೀರ್ಪು ನೀಡಿರುತ್ತಾರೆ . ಆರೋಪಿಗಳ ಪರವಾಗಿ ಸುಳ್ಯದ ನ್ಯಾಯವಾದಿಗಳಾದ ಯಂ. ವೆಂಕಪ್ಪ ಗೌಡ,ಚಂಪಾ ವಿ. ಗೌಡ, ರಾಜೇಶ್ ಬಿ.ಜಿ., ಶ್ಯಾಮ್ ಪ್ರಸಾದ್ ಹಾಗೂ ಮನೋಜ್ ರವರು ವಕಾಲತ್ತು ವಹಿಸಿದ್ದರು .
- Monday
- November 25th, 2024