Ad Widget

ಹಿರಿಯ ರಾಜಕೀಯ ನೇತಾರ ದುರ್ಗಾದಾಸ್ ಮಲ್ಲಾರ ನಿಧನ

ತಾಲೂಕು ಬೋರ್ಡ್ ಮಾಜಿ ಸದಸ್ಯ, ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯ, ಮಂಡಲ ಪಂಚಾಯತ್ ಮಾಜಿ ಸದಸ್ಯ, ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಹರಿಹರ ಪಲ್ಲತ್ತಡ್ಕ ಮದ್ಯಮುಕ್ತ ಹೋರಾಟ ಸಮಿತಿ ಅಧ್ಯಕ್ಷರಾದ ದುರ್ಗಾದಾಸ್ ಮಲ್ಲಾರ ಅವರು ಮಾ.18 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯಕ್ಕೆ ಒಳಗಾದ ಅವರನ್ನು ಮಾ.18 ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು ಎಂದು ತಿಳಿದುಬಂದಿದೆ.
ಮೃತರಿಗೆ 71 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ತಾರಾ ಮಲ್ಲಾರ, ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ, ಸಹೋದರರಾದ ಗಧಾದರ ಮಲ್ಲಾರ, ಸುರೇಂದ್ರ ಮಲ್ಲಾರ, ಸಹೋದರಿ ವಸಂತಿ ಹಾಗೂ ಕುಟುಂಬಸ್ಥರು ಬಂಧು ಮಿತ್ರರನ್ನು ಅಗಲಿದ್ದಾರೆ.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!