
ಅವಿನಾಶ್ ಮೋಟಾರ್ ಸಂಸ್ಥೆಯ ನಾರಾಯಣ ರೈ ಸಂಸ್ಮರಣಾ ಸಮಿತಿಯ ವತಿಯಿಂದ ನರಾಯಣ ರೈ ಸಂಸ್ಮರಣಾ ಕಾರ್ಯಕ್ರಮ ಎ.3 ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಮರಣಾ ಸಮಿತಿಯ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ
ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಬಿಡುಗಡೆ ಮಾಡುವರು. ಜಾನಪದ ವಿದ್ವಾಂಸ ಡಾ.ಸುಂದರ ಕೇನಾಜೆ ಸಂಸ್ಕರಣಾ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್, ತೊಡಿಕಾನ
ಮಲ್ಲಿಕಾರ್ಜುನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ.ದಿವಾಕರ ರೈ, ಜಿ.ಪಂ.ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್
ಕಂದಡ್ಕ, ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ನಾರಾಯಣ ರೈ ಸಂಸ್ಕರಣಾ ಸಮಿತಿಯ ಸಂಯೋಜಕ
ಸುರೇಶ್ ಕಣೆಮರಡ್ಕ ಉಪಸ್ಥಿತರಿರುವರು. ಸಮಾರಂಭದಲ್ಲಿ ನಾರಾಯಣ ರೈ ಕುರಿತ ಸಾಕ್ಷ್ಯಚಿತ್ರ ಬಿಡುಗಡೆ ಮತ್ತು ಪ್ರದರ್ಶನ ನಡೆಯಲಿದೆ ಎಂದು ಅವರು ವಿವರಿಸಿದರು.