ಸೋಣಂಗೇರಿ ಸ.ಉ.ಹಿ.ಪ್ರಾ ಶಾಲಾ ವತಿಯಿಂದ ಶಾಲೆಗೆ ಗೈರು ಹಾಜರಾಗುತ್ತಿರುವ ಮಕ್ಕಳಿಗೆ ಮತ್ತು ಪೋಷಕರಿಗಾಗಿ ಮಾಹಿತಿ ಕಾರ್ಯಗಾರವನ್ನು ಮಾ.21 ರಂದು ಸುಡಿಕಿರಿಗುಡ್ಡೆ ಎಂಬಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಬು ಇವರು ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ನೆಕ್ರಾಜೆ, ಶಿಕ್ಷಣ ಸಂಯೋಜಕ ಶ್ರೀ ವಸಂತ್ ಏನೆಕಲ್ಲು, ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಉಷಾ, ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ದೀಪ, ಈಶ್ವರ ನಾಯ್ಕ, ಶ್ರೀಮತಿ ಅಂಬಿಕಾ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಪ್ರೇಮಾ ರೈ, ಉಪಾಧ್ಯಕ್ಷ ಚಿದಾನಂದ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಸವಿತಾ.ಎನ್.ಪಿ, ಟಿ.ಜಿ.ಟಿ ಶಿಕ್ಷಕಿ ಸವಿತಾ.ಯು.ಆರ್, ಆರೋಗ್ಯ ಕಾರ್ಯಕರ್ತೆ ಕುಮಾರಿ ಸುರಕ್ಷಾ, ಆಶಾ ಕಾರ್ಯಕರ್ತೆ ಶ್ರೀಮತಿ ಜಗನ್ಮೋಹನಿ, ಎಸ್.ಡಿ.ಎಂ.ಸಿ ಸದಸ್ಯರು ಮತ್ತು ಪೋಷಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಿ.ಡಿ.ಪಿ.ಓ ಶ್ರೀಮತಿ ರಶ್ಮಿ ನೆಕ್ರಾಜೆ ಅವರು ಮಕ್ಕಳು ಮತ್ತು ಪೋಷಕರೊಂದಿಗೆ ಮುಕ್ತ ಸಮಾಲೋಚನೆ ನಡೆಸಿದರು. ಶಿಕ್ಷಣ ಸಂಯೋಜಕರು, ಶಿಕ್ಷಣದ ಮಹತ್ವ, ಸರಕಾರದಿಂದ ಮಕ್ಕಳಿಗೆ ಸಿಗುವ ಸೌಲಭ್ಯಗಳ ತಿಳಿಸಿದರು. ಅಂಗನವಾಡಿ ಮೇಲ್ವಿಚಾರಕಿ ಅಂಗನವಾಡಿಯಿಂದ ಸಿಗುವ ಸವಲತ್ತುಗಳ ಬಗ್ಗೆ ತಿಳಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರು ಗ್ರಾಮ ಪಂಚಾಯತ್ ನಿಂದ ಪಡೆಯಬಹುದಾದ ಸವಲತ್ತುಗಳ ಬಗ್ಗೆ ಮತ್ತು ಹೇಗೆ ಪಡೆದುಕೊಳ್ಳಬೇಕು ಎಂಬುವುದರ ಬಗ್ಗೆ ಮಾಹಿತಿ ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಸ್ವಾಗತಿಸಿ, ಟಿ.ಜಿ.ಟಿ ಶಿಕ್ಷಕಿ ವಂದಿಸಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷರು ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳನ್ನು ಅಧಿಕಾರಿಗಳು ಶಾಲೆಗೆ ಕರೆದುಕೊಂಡು ಬಂದು ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸಿದರು.
- Thursday
- November 21st, 2024