- Friday
- April 4th, 2025

ಐನೆಕಿದು ಗ್ರಾಮದ ಕೆದಿಲ ನಾಗಪ್ಪ ಗೌಡ ಕೆದಿಲ ರವರ ಮನೆಯಲ್ಲಿ ಶ್ರೀ ಪಾಷಾಣಮೂರ್ತಿ ದೈವದ ನೇಮೋತ್ಸವವು ಮಾ.5ರಂದು ನಡೆಯಿತು. ಈ ಸಂದರ್ಭದಲ್ಲಿ ಕೆದಿಲ ಕುಟುಂಬಸ್ಥರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.

ಪುತ್ತೂರು ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದ ಸುಳ್ಯದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಐವರ್ನಾಡಿನ ಯುವಕನ ವಿರುದ್ಧ ಪುತ್ತೂರು ಮಹಿಳಾ ಠಾಣಾ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಐವರ್ನಾಡು ನಿವಾಸಿ ರಕ್ಷಿತ್ ಪೋಕ್ಸೋ ಪ್ರಕರಣದಲ್ಲಿ ಬಂಧಿತನಾದ ಆರೋಪಿ. ಸುಳ್ಯ ಮೂಲದ 16 ವರ್ಷದ ಅಪ್ರಾಪ್ತ ನೊಂದ ಬಾಲಕಿ ಪುತ್ತೂರು ಹಾಸ್ಟೆಲ್ ನಿಂದ...

ಗುತ್ತಿಗಾರಿನ ಶ್ರೀ ಮುತ್ತಪ್ಪ ದೈವಸ್ಥಾನ ದಲ್ಲಿ ಶ್ರೀ ಮುತ್ತಪ್ಪ ತಿರುವಪ್ಪ ದೈವದ ನೇಮೋತ್ಸವ ಆರಂಭಗೊಂಡಿದ್ದು ಮಾ.5 ರಂದು ಬೆಳಿಗ್ಗೆ ಶ್ರೀ ಗಣಪತಿ ಹವನ, ಸಂಜೆ ಶ್ರೀ ದೈವಕ್ಕೆ ಪೈಂಗುತ್ತಿ, ಶ್ರೀ ಮುತ್ತಪ್ಪ ದೈವದ ನೇಮ ನಡೆದು ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಭೇಟಿ ನೀಡಿ...

ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಂದು ಕೊರತಿ ದೈವದ 7ನೇ ವರ್ಷದ ನೇಮೋತ್ಸವ ಹಾಗೂ ಮಾ.03 ರಿಂದ ಮಾ.04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ 53ನೇ ವರ್ಷದ ಒತ್ತೆಕೋಲ ನಡೆಯಿತು.ಮಾ.02 ರಂದು ರಾತ್ರಿ ಶ್ರೀ ಕೊರತಿ ದೈವದ ನಡಾವಳಿ ಹಾಗೂ ಅನ್ನಸಂತರ್ಪಣೆ ನಡೆಯಿತು.ಮಾ.03 ರಂದು ಸಂಜೆ ಭಂಡಾರ ತೆಗೆದು, ಮೇಲೇರಿಗೆ ಅಗ್ನಿ ಸ್ಪರ್ಶ ನಡೆಯಿತು....

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ 2020-21 ರ ಸಾಲಿನ ವಾರ್ಷಿಕ ಮಹಾಸಭೆಯು ಮಾ.4 ರಂದು ಕೆ.ವಿ.ಜಿ.ಮೆಡಿಕಲ್ ಕಾಲೇಜಿನಲ್ಲಿರುವ ಅಕಾಡೆಮಿ ಪ್ರಧಾನ ಕಾರ್ಯಾಲಯದಲ್ಲಿ ನಡೆಯಿತು. ಅಕಾಡೆಮಿ ಅಧ್ಯಕ್ಷ ಡಾ. ಕೆ. ವಿ. ಚಿದಾನಂದರವರು ಸಭೆಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ 2020-21ರ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಮಂಡಿಸಿ ಸಭೆಯ ಅನುಮೋದನೆ...

ಶ್ರೀ ಜಲದುರ್ಗಾದೇವಿ ಭಜನಾ ಮಂಡಳಿ ಪೆರುವಾಜೆ , ಶ್ರೀ ಜಲದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಪೆರುವಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಮಾ.04 ರಂದುಶ್ರೀ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ 20ನೇ ವರ್ಷದ ಏಕಾಹ ಭಜನೆ ಆರಂಭಗೊಂಡಿತು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪ್ರಾರ್ಥನೆಯೊಂದಿಗೆ ಸಹ ಅರ್ಚಕ ರಾಮಚಂದ್ರ ಶಬರಾಯ ದೀಪ ಬೆಳಗಿಸಿದರು....

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಪಾಜೆ ವಲಯದ ತೊಡಿಕಾನ ಕಾರ್ಯಕ್ಷೇತ್ರದ ಅಡ್ಯಡ್ಕದಲ್ಲಿ ಸಿ ಎಸ್ ಸಿ ಡಿಜಿಟಲ್ ಸೇವಾಕೇಂದ್ರವನ್ನು ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯರಾದ ಉಷಾ, ಸಂಪಾಜೆ ವಲಯ ಮೇಲ್ವಿಚಾರಕರು ಸುಧೀರ್ ನೆಕ್ರಾಜೆ, ನೋಡೆಲ್...

ಪೈಚಾರಿನ ಎನ್ ಎಂ.ಪಿ. ಕಾಂಪ್ಲೆಕ್ಸ್ ನಲ್ಲಿ ಎ ವನ್ ಸ್ಟೀಲ್ ವರ್ಕ್ಸ್ & ಫರ್ನಿಚರ್ ಮಾ.3ರಂದು ಶುಭಾರಂಭಗೊಂಡಿತು. ನಾವೂರಿನ ಯು.ಎಸ್.ಕುಂಞಿಕೋಯ ತಂಗಳ್ ಸಆದಿ ದುಃವಾ ನೆರವೇರಿಸಿದರು.

ಸುಬ್ರಹ್ಮಣ್ಯದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ದೈವದ ಒತ್ತೆಕೋಲ ಮಹೋತ್ಸವದ ಅಂಗವಾಗಿ ಬುಧವಾರ ರಾತ್ರಿ ಕೊರತಿ ದೈವದ ನೇಮೋತ್ಸವ ನಡೆಯಿತು.ಆರಂಭದಲ್ಲಿ ಭಂಡಾರ ತೆಗೆದ ಬಳಿಕ ಶ್ರೀ ದೈವದ ನರ್ತನ ಸೇವೆ ನೆರವೇರಿತು.ನಂತರ ಪ್ರಸಾದ ವಿತರಣೆ ನಡೆಯಿತು.ನಂತರ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು.ಈ ಸಂದರ್ಭ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಕುಮಾರ್ ರುದ್ರಪಾದ,ಅಭಿವೃದ್ಧಿ ಸಮಿತಿ ಅಧ್ಯಕ್ಷ...

All posts loaded
No more posts