
ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಮೋನಿಷ್ ತಂಟೆಪ್ಪಾಡಿ ಸಾಧನೆ ಮೆರೆದಿದ್ದಾರೆ. ಬದ್ದ ಪದ್ಮಾಸನ ದಲ್ಲಿ 1ಗಂಟೆ 02 ನಿಮಿಷ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಕಳೆದ ಏಳು ತಿಂಗಳಿಂದ ಯೋಗಾಭ್ಯಾಸವನ್ನು ನಿರಂತರ ಯೋಗ ಕೇಂದ್ರ ಸುಳ್ಯ ಇದರ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಯೋಗ ಸ್ಪರ್ಧೆಯಲ್ಲಿ ಸಹ ಹಲವಾರು ಪ್ರಶಸ್ತಿ ಪಡೆದಿರುತ್ತಾರೆ. ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆ ಕುಕ್ಕುಜಡ್ಕ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ತಂಟೆಪ್ಪಾಡಿ ವಿಶ್ವನಾಥ ಮತ್ತು ಶ್ರೀಮತಿ ದಯಾಮಣಿ ರವರ ಪುತ್ರ.