ದ ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಆದೇಶದಂತೆ ಏ.1 ರಿಂದ 1ವಾರಗಳ ಸ್ವಚ್ಚತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದರ ಅಂಗವಾಗಿ ರಸ್ತೆ ಬದಿ ಬಿದ್ದಿದ್ದ ಸ್ವಚ್ಚತಾ ತ್ಯಾಜ್ಯಗಳ ತೆರವುಗೊಳಿಸುವ ಕಾರ್ಯಾಚರಣೆಯನ್ನು ನಡೆಸಲಾಯಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯವನ್ನು ಎಸೆದಿರುವ 3 ಚೀಲಗಳನ್ನು ಪರಿಶೀಲಿಸಿ ತ್ಯಾಜ್ಯವನ್ನು ಎಸೆದವರಿಗೆ ಒಟ್ಟು 4000 ರೂ ದಂಡನೆಯನ್ನು ವಿಧಿಸಲಾಗಿದೆ. ಈ ಸಂದರ್ಭದಲ್ಲಿ ಗ್ರಾಪಂ ಪಿಡಿಒ ಜಯಪ್ರಕಾಶ್ ಎಂ ಆರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರಿಣಿ ದೇರಾಜೆ ಸದಸ್ಯರಾದ ಶಿವಾನಂದ ಕುಕ್ಕುಂಬಳ ಸ್ವಚ್ಚತಾ ಸಂಘದ ಸದಸ್ಯರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
- Thursday
- November 21st, 2024