
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ 40 ಉಪಾಧ್ಯಕ್ಷರು ಮತ್ತು 109 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ ಎಂದು ಎಐಸಿಸಿ ಜನರಲ್ ಸೆಕ್ರೆಟರಿ
ಕೆ.ಸಿ.ವೇಣುಗೋಪಾಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುಳ್ಯದಿಂದ ಧನಂಜಯ ಅಡ್ಪಂಗಾಯ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ಧನಂಜಯ ಅಡ್ಪಂಗಾಯ ರವರು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾಗಿ, ಅಜ್ಜಾವರ ಗ್ರಾ.ಪಂ.ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನ ಮನ್ನಣೆ ಗಳಿಸಿದ್ದಾರೆ. ಪ್ರಸ್ತುತ ದ.ಕ.ಗೌಡ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಕೆಪಿಸಿಸಿ ಸಹಾಯಹಸ್ತ ಕಾರ್ಯಕ್ರಮದ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲಾ ಉಸ್ತುವಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.