- Wednesday
- April 2nd, 2025

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರಿಗೆ ವರ್ಗಾವಣೆಗೆ ಆದೇಶವಾಗಿದೆ. ಅವರು ಬೆಳಗಾವಿ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರಿನ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರಿಗೆ ಆದೇಶವಾಗಿದೆ ಎಂದು ತಿಳಿದು ಬಂದಿದೆ.

ವಯೋಸಹಜ ಅನಾರೋಗ್ಯದಿಂದ ನಿಧನರಾದ ಹಿರಿಯ ಸಾಹಿತಿ ಟಿ ಜಿ ಮೂಡೂರ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ನಂತೂರಿನ ಭಾರತಿ ಕಾಲೇಜಿನಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರರಾದ ಶ್ರೀ ವಸಂತ ಕುಮಾರ್ ಪೆರ್ಲರವರು ಮಾತನಾಡಿ ಟಿ...