
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರಿಗೆ ವರ್ಗಾವಣೆಗೆ ಆದೇಶವಾಗಿದೆ. ಅವರು ಬೆಳಗಾವಿ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರಿನ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರಿಗೆ ಆದೇಶವಾಗಿದೆ ಎಂದು ತಿಳಿದು ಬಂದಿದೆ.