- ಮರಕತ ಶ್ರೀ ದುರ್ಗಾಪರಮೇಶ್ವರಿ ಪ್ರತಿಷ್ಠಾ ವಾರ್ಷಿಕೋತ್ಸವ ಸಂಪನ್ನ
ಪ್ರತಿಯೊಬ್ಬರ ಹೃದಯದಲ್ಲಿ ಧರ್ಮದ ಪ್ರತಿಷ್ಠಾಪನೆ ಆಗಬೇಕಾಗಿದೆ. ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಧಾರ್ಮಿಕ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಸುಳ್ಯದ ರೋಟರಿ ಆಂಗ್ಲಮಾಧ್ಯಮ ಶಾಲಾ ಶಿಕ್ಷಕಿ ನಳಿನಾಕ್ಷಿ ಆಚಾರ್ಯ ಅವರು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಏ. 23 ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು.
ನಮ್ಮ ದೇಶ ಹಾಗೂ ಧರ್ಮದ ರಕ್ಷಣೆಗಾಗಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ಜತೆಗೆ ತ್ಯಾಗ, ಆತ್ಮವಿಶ್ವಾಸ ಮೂಡಿಸಬೇಕಿದೆ. ಈ ಬಗ್ಗೆ ಊರಿನ ಹಿರಿಯರು ಸಂಘಸಂಸ್ಥೆಗಳು, ದೇವಸ್ಥಾನದ ಆಡಳಿತ ಮಂಡಳಿ ಗಮನ ಹರಿಸಬೇಕಾಗಿದೆ ಎಂದರು. ನಮ್ಮ ದೇವಸ್ಥಾನ ಗಳಲ್ಲಿ ಮಕ್ಕಳಿಗೆ ಸಂಸ್ಕಾರ ನೀಡಬೇಕಾಗಿದೆ. ಭಜನೆಗಳನ್ನು ಆರಂಭಿಸಿ ಆ ಮುಖಾಂತರ ಮನೆಗಳಲ್ಲಿ ವಿಭಜನೆ ಕಡಿಮೆ ಮಾಡಬೇಕಾಗಿದೆ. ಧಾರ್ಮಿಕ ಶಿಕ್ಷಣದ ಕೊತರೆಯಿಂದ ವಸ್ತುವಿಗೆ ಮಾತ್ರ ಬೆಲೆ ಮಾನವೀಯತೆಗೆ ಬೆಲೆ ಇಲ್ಲದಾಗಿದೆ, ಹಿರಿಯರಿಗೆ ಗೌರವ ನೀಡುವ ಸಂಸ್ಕಾರ ನೀಡಬೇಕಿದೆ ಎಂದರು. ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಮಾವಿನಕಟ್ಟೆ ವಹಿಸಲಿದ್ದರು. ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಗ್ರಾ.ಪಂ.ಅಧ್ಯಕ್ಷೆ
ಶ್ರೀಮತಿ ರೇವತಿ ಆಚಳ್ಳಿ, ಉಪಾಧ್ಯಕ್ಷೆ ಶ್ರೀಮತಿ ಪ್ರಮೀಳ ಎರ್ದಡ್ಕ, ಉತ್ಸವ ಸಮಿತಿ ಅಧ್ಯಕ್ಷ ಬಾಲಕೃಷ್ಣ ಉಜಿರಡ್ಕ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಏ.23ರಂದು ಬೆಳಿಗ್ಗೆ ಚಂಡಿಕಾ ಹೋಮ, ಉಗ್ರಾಣ ತುಂಬಿಸುವುದು,ಚಂಡಿಕಾ ಹೋಮದ ಪೂರ್ಣಾಹುತಿ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ರಾತ್ರಿ ಮಹಾಪೂಜೆ ನಂತರ ಶ್ರೀ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಉತ್ಸವ, ವಸಂತಕಟ್ಟೆ ಪೂಜೆ ನಡೆಯಿತು
ಏ.24ರಂದು ಶ್ರೀ ಗಣಪತಿ ಹವನ, ಕಲಶಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ,
ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ದೇವರಿಗೆ ಕಲಶ ಅಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದು ರಾತ್ರಿ ಶ್ರೀ ಕ್ಷೇತ್ರದ ದೈವಗಳ ಭಂಡಾರ ತೆಗೆದು ಶ್ರೀ ಚಾಮುಂಡಿ ಅಮ್ಮನವರ ನೇಮೋತ್ಸವ ಹಾಗೂ ಪ್ರಸಾದ ವಿತರಣೆ, ಶ್ರೀ ವರ್ಣಾರ ಪಂಜುರ್ಲಿ ಹಾಗೂ ಶ್ರೀ ಪುರುಷ ದೈವದ ನೇಮ, ಪ್ರಾತಃಕಾಲ ಶ್ರೀ ಕುಪ್ಪೆ ಪಂಜುರ್ಲಿ, ಶ್ರೀ ಭೂಮಿ ಗುಳಿಗ ಹಾಗೂ ರಾಹು ಗುಳಿಗ ದೈವಗಳ ನೇಮೋತ್ಸವ ನಡೆಯಿತು.
ಏ.24ರಂದು ತೆಲಿಕೆದ ತೇಟ್ಲ ತುಳು ಯಕ್ಷ ಹಾಸ್ಯ ವೈಭವ ಪ್ರದರ್ಶನ, ಆಕರ್ಷಕ ಸಿಡಿಮದ್ದು ಪ್ರದರ್ಶನ ಭಕ್ತರನ್ನು ರಂಜಿಸಿತು.