ಕುಕ್ಕುಜಡ್ಕ ಶ್ರೀ ಮಹಾವಿಷ್ಣು ರಕ್ತೇಶ್ವರಿ ಪರಿವಾರ ದೈವಗಳ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದಿಂದ 2 ಲಕ್ಷ ಅನುದಾನ ಮಂಜೂರುಗೊಂಡಿದ್ದು, ಅನುದಾನದ ಡಿಡಿ ಯನ್ನು ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್ ಹಾಗೂ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವಿಶ್ವನಾಥ್ ರೈ ಕಳಂಜ ಅವರು ಎ.28 ರಂದು ದೈವಸ್ಥಾನದ ಸಮಿತಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎಂ.ಜಿ ಸತ್ಯನಾರಾಯಣ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ರಾಘವೇಂದ್ರ ಪುಳಿ ಮಾರಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಕ್ಕುಜಡ್ಕ ಒಕ್ಕೂಟದ ಅಧ್ಯಕ್ಷರಾದ ಸುಬ್ರಾಯ ನಾಯ್ಕ ಕುಕ್ಕುಜಡ್ಕ ಹಾಗೂ ಪೈಲಾರು ಒಕ್ಕೂಟದ ಅಧ್ಯಕ್ಷರಾದ ನಾರಾಯಣ ಕೋಡ್ತುಕುಳಿ, ಪದಾಧಿಕಾರಿಗಳಾದ ಚೆನ್ನಕೇಶವ, ಕೃಷ್ಣಕುಮಾರ್ ಬಾಲಾಜಿ ಸ್ಟೋರ್ ಕುಕ್ಕುಜಡ್ಕ, ಆಂತರಿಕ ಲೆಕ್ಕಪರಿಶೋಧಕರಾದ ಉಮೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ ಕಾನಾವು, ಸೇವಾಪ್ರತಿನಿಧಿಗಳಾದ ದಿವ್ಯಾ ಹಾಗೂ ಕವಿತಾ ಹಾಗೂ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ