ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಹಾಗೂ ಹರಿಹರ ಪಲ್ಲತ್ತಡ್ಕ ಸ.ಪ.ಪೂ ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಎ.29 ರಂದು ಹರಿಹರ ಪಲ್ಲತ್ತಡ್ಕ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡುವ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಶಿಕ್ಷಣವನ್ನು ಹರಿಹರ ಪಲ್ಲತ್ತಡ್ಕ ಪ್ರೌಢಶಾಲೆಯಲ್ಲಿ ಕೊಡಿಸುವಂತೆ ವಿನಂತಿಸಲಾಗಿದ್ದು, ಉತ್ತಮ ಶಿಕ್ಷಣ ಹಾಗೂ ಪೂರ್ಣ ಪ್ರಮಾಣದ ಶಿಕ್ಷಕರ ವರ್ಗ ಇರುವುದಾಗಿ ಪೋಷಕರಿಗೆ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಉಪಾಧ್ಯಕ್ಷರಾದ ವಿಜಯ ಅಂಗಣ ಹಾಗೂ ಸದಸ್ಯರುಗಳಾದ ಶ್ರೀಮತಿ ಬಿಂದು.ಪಿ, ಶಿಲ್ಪಾ ಕೊತ್ನಡ್ಕ ಹಾಗೂ ಸ.ಪ.ಪೂ ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲವ ಮಲ್ಲಾರ ಹಾಗೂ ಸದಸ್ಯರಾದ ಉಮೇಶ್ ಕೊಪ್ಪತ್ತಡ್ಕ, ಸಾವಿತ್ರಿ.ಕೆ ಹಾಗೂ ಪ್ರೌಢಶಾಲಾ ವಿಭಾಗದ ಶಿಕ್ಷಕರಾದ ಮೇದಪ್ಪ.ಎ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ