ಆಲೆಟ್ಟಿ ಗ್ರಾಮದ ನಾಗಪಟ್ಟಣ ಸೇತುವೆ ಕಾಮಗಾರಿ ತುರ್ತಾಗಿ ದುರಸ್ತಿ ಪಡಿಸುವಂತೆ ಆಗ್ರಹಿಸಿ ಪಂಚಾಯತ್ ಸದಸ್ಯ ಧರ್ಮಪಾಲ ಕೊಯಿಂಗಾಜೆ ಯವರ ನೇತೃತ್ವದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರರಿಗೆ ಕೆಲ ದಿನಗಳ ಹಿಂದೆ ಮನವಿ ಸಲ್ಲಿಸಿದ್ದರು. ಇಲಾಖೆಯ ಅಭಿಯಂತರರಾದ ಲೋಕೇಶ್ ಮತ್ತು ಪರಮೇಶ್ವರ ರವರು ಎ.29 ರಂದು ಸ್ಥಳಕ್ಕೆ ಭೇಟಿ ನೀಡಿ ಸೇತುವೆಯ ಕಾಮಗಾರಿ ಕುರಿತು ಪರಿಶೀಲನೆ ನಡೆಸಿ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶೀಘ್ರಗತಿಯಲ್ಲಿ ಮಾಡುವುದಾಗಿ ಭರವಸೆ ನೀಡಿದ್ದರು. ಸುಳ್ಯದ ಗಾಂಧಿನಗರದಿಂದ ಕೂರ್ನಡ್ಕ ದವರೆಗೆ ಲೋಕೋಪಯೋಗಿ ಇಲಾಖೆಯ ರಸ್ತೆ ಎಂದು ಪರಿಗಣಿಸಿ ಆದೇಶ ಬಂದಿದ್ದು ಮುಂದಿನ ದಿನಗಳಲ್ಲಿ ಸೇತುವೆ ಕಾಮಗಾರಿಯನ್ನು ವೈಜ್ಞಾನಿಕವಾಗಿ ದುರಸ್ತಿ ಪಡಿಸುವ ಕುರಿತು ಇಂಜಿನಿಯರ್ ರವರು ತಿಳಿಸಿದ್ದರು. ಗ್ರಾ.ಪಂ.ಸದಸ್ಯರ ಮನವಿಗೆ ಸ್ಪಂದಿಸಿದ ಇಲಾಖೆ ತಾತ್ಕಾಲಿಕವಾಗಿ ನಾಗಪಟ್ಟಣ ಸೇತುವೆಯ ದುರಸ್ತಿ ಮಾಡಿದೆ. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯ ಧರ್ಮಪಾಲ ಕೊಯಿಂಗಾಜೆ, ಸ್ಥಳೀಯರಾದ ಆನಂದ ನಾಗಪಟ್ಟಣ, ಚಿತ್ರವೇಲು ನಾಗಪಟ್ಟಣ, ಜೀವರತ್ನ ನಾಗಪಟ್ಟಣ,ಪುಷ್ಪರಾಜ್ ನಾಗಪಟ್ಟಣ ಮತ್ತಿತರರು ಉಪಸ್ಥಿತರಿದ್ದರು.
- Thursday
- November 21st, 2024