Ad Widget

ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಅವರಿಗೆ ಆರ್ಯಭಟ ಪ್ರಶಸ್ತಿ

ಸುಳ್ಯದಲ್ಲಿ ಉದ್ಯಮದ ಜತೆಗೆ ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಅವರಿಗೆ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರು ಸುಳ್ಯದಲ್ಲಿ ಸ್ವಾತಿ ಲಾಡ್ಜ್ ಹಾಗೂ ಸ್ವಾತಿ ನರ್ಸರಿ ಪ್ರಾರಂಭಿಸಿ ಯಶಸ್ಸು ಗಳಿಸಿದ ಇವರು ಕಾಂತಮಂಗಲದ ಶ್ರೀ ರಾಘವೇಂದ್ರ ಮಠದ ಆಡಳಿತ ಸಮಿತಿ ಅಧ್ಯಕ್ಷ ಹಾಗು ಬೃಂದಾವನ ಸೇವಾ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಸೇವೆ ಸಲ್ಲಿಸುತ್ತಿದ್ದಾರೆ. ಧಾರ್ಮಿಕ ಕ್ಷೇತ್ರದ ಕೊಡುಗೆಗಾಗಿ ಆರ್ಯಭಟ ಸಾಂಸ್ಕೃತಿಕ ಸಂಘಟನೆ ನೀಡುವ ಪ್ರಶಸ್ತಿಗೆ ಶ್ರೀಕೃಷ್ಣ ಸೋಮಯಾಗಿ ಅವರನ್ನು ಆಯ್ಕೆ ಮಾಡಲಾಗಿದೆ. ಮೇ.25ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಶ್ರೀ ರಾಘವೇಂದ್ರ ಮಠದ ಟ್ರಸ್ಟಿ, ಆಡಳಿತ ಸಮಿತಿ ಅಧ್ಯಕ್ಷ, ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹೀಗೆ ವಿವಿಧ ಹುದ್ದೆಗಳನ್ನು ನಿರ್ವಹಿಸುತ್ತಿರುವ ಶ್ರೀಕೃಷ್ಣ ಸೋಮಯಾಗಿ ವಿವಿಧ ದೇವಸ್ಥಾನಗಳ ಸಮಿತಿಗಳಲ್ಲಿ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಸಕ್ರೀಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸುಳ್ಯ ಚೆನ್ನಕೇಶವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆರ್ಥಿಕ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!