ಸುಳ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಚೇತನ್ ನಾವೂರು ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಸುಳ್ಯ ಮಂಡಲದಲ್ಲಿ ಮೂರು ವರ್ಷಗಳ ಅವಧಿಗೆ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಬೆಳಂದೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ವ್ಯಾಪ್ತಿಯಿಂದ ಚೇತನ್ ನಾವೂರು ಅವರನ್ನು ಆಯ್ಕೆ ಮಾಡಲಾಗಿತ್ತು.
ಸ್ಥಳೀಯ ಬಿಜೆಪಿ ನಾಯಕರ ವರ್ತನೆಯಿಂದ ಮನನೊಂದು ಪಕ್ಷದ ಜವಾಬ್ದಾರಿಗೆ ರಾಜೀನಾಮೆ ನೀಡಿದ್ದೇನೆ. ಮುಂದೆ ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತೇನೆ ಎಂದು ಅಮರ ಸುದ್ದಿಗೆ ತಿಳಿಸಿದ್ದಾರೆ.