Ad Widget

ನ್ಯಾಷನಲ್ ಲೆವೆಲ್ ಅಬಾಕಸ್ ಸ್ಪರ್ಧೆ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ 6 ವಿದ್ಯಾರ್ಥಿಗಳಿಗೆ
ಸಮಗ್ರ ಪ್ರಶಸ್ತಿ

ಪುತ್ತೂರು ಸಿಟಿ ಆಸ್ಪತ್ರೆ ಬಳಿ ಕಾರ‍್ಯಾಚರಿಸುತ್ತಿರುವ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ 21 ವಿದ್ಯಾರ್ಥಿಗಳು ಎಪ್ರಿಲ್ 10 ರಂದು ನಡೆದ ನ್ಯಾಷನಲ್ ಲೆವೆಲ್ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿ, ಅರ್ಹತಾ ಅಂಕಗಳನ್ನು ಗಳಿಸುವುದರೊಂದಿಗೆ, 6 ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಹೊರ ಹೊಮ್ಮುವ ಮೂಲಕ ಸಮಗ್ರ ಪ್ರಶಸ್ತಿಯನ್ನು ಪಡೆದು ಪುತ್ತೂರಿಗೆ ಕೀರ್ತಿಯನ್ನು ತಂದಿರುತ್ತಾರೆ.


ಈ ಎಲ್ಲಾ ವಿದ್ಯಾರ್ಥಿಗಳು ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 6
ತಿಂಗಳಿನಿಂದ ಅಬಾಕಸ್ ತರಬೇತಿಯನ್ನು ಪಡೆದಿರುತ್ತಾರೆ. ಹಾಗೂ ಕಳೆದ ನವಂಬರ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಆನ್‌ಲೈನ್ ಅಬಾಕಸ್ ಸ್ಪರ್ಧೆಯಲ್ಲಿ 3 ವಿದ್ಯಾರ್ಥಿಗಳು ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿ ಪಡೆದಿರುವುದು ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ ಮತ್ತೊಂದು ಹೆಗ್ಗಳಿಕೆ.
ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯು ಅಬಾಕಸ್‌ನ ಜೊತೆಗೆ ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ತರಬೇತಿ, ವೇದ ಗಣಿತ, ಬ್ಯಾಂಕಿಂಗ್ ಹಾಗೂ ಇತರೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನುರಿತ ತರಬೇತುದಾರರಿಂದ ಸಮಗ್ರ ತರಬೇತಿಯನ್ನು ಪುತ್ತೂರು ಮತ್ತು ಸುಳ್ಯದಲ್ಲಿ ನೀಡುತ್ತಿದೆ. ಈ ಸಂಸ್ಥೆಯಲ್ಲಿ ದಾಖಲಾತಿಯನ್ನು ಬಯಸುವವರು 9632320477 ನಂಬರಿಗೆ ನೇರವಾಗಿ ಸಂಪರ್ಕಿಸಬಹುದು ಎಂದು ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!