ಸುಬ್ರಹ್ಮಣ್ಯ : ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸಿರುವುದರ ವಿರುದ್ಧ ಪ್ರತಿಭಟನೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಲೆ ಕುಡಿಯ ಜನಾಂಗದ ಪಂಚಪರ್ವ ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸಿದ್ದರ ವಿರುದ್ಧ ಪ್ರತಿಭಟನೆ ನಡೆಯಿತು. ಮಲೆಕುಡಿಯ ಹಿತ ರಕ್ಷಣೆಯ ವೇದಿಕೆಯ ಸಂಚಾಲಕರಾದ ಪದ್ಮಕುಮಾರ ಗುಂಡಡ್ಕ ಪ್ರಸ್ತಾವಿಕವಾಗ ಮಾತನಾಡಿ ದೇವಸ್ಥಾನ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವಾಗ ಭಕ್ತಿಯಿಂದ ಸೇವೆ ಸಲ್ಲಿಸಿದವರು ಮಲೆಕುಡಿಯ ಜನಾಂಗ, ಇದೀಗ ಏಕಾಎಕಿ ಸೇವೆಯಿಂದ ವಜಾಗೊಳಿಸಿದ್ದು ಸಮುದಾಯಕ್ಕೆ ಮಾಡಿದ ಅನ್ಯಾಯ ಎಂದು ಆರೋಪಿಸಿದರು. ಮಳೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿ ಮಾತನಾಡಿ “ಮುಖ್ಯ ಕಾರ್ಯನಿರ್ವಾಹಣಾಧಿಕಾರಿ 27 ಜನರನ್ನು ಸೇವೆಯಿಂದ ವಜಾಗೊಳಿಸಿದ್ದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹ. ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಹೋರಾಟ ನಡೆಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹ ಮಾಣಿ, ಕುಕ್ಕೆ ಸುಬ್ರಹ್ಮಣ್ಯ ವಿಶ್ವ ಹಿಂದು ಪರಿಷತ್ ಅಧ್ಯಕ್ಷ ಅಶೋಕ ಆಚಾರ್ಯ, ಸಚಿನ್ ವಳಲಂಬೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading