Ad Widget

ಗಾಂಧಿನಗರ : ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ

ವಿವಾಹಿತ ಯುವತುಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿರುವ ಬಾಡಿಗೆ ಮನೆಯಲ್ಲಿ ವರದಿಯಾಗಿದೆ.

ಸುಳ್ಯ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಎಂಬವರ ಪುತ್ರಿ ಆಯೀಶಾ ಎಂಬವರು ಆತ್ಮಹತ್ಯೆ ಮಾಡಿಕೊಂಡ ಯುವತಿ.
ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಈಕೆಯನ್ನು ನೋಡಿದ ಮನೆಯವರು ಕೂಡಲೇ ಕೆಳಗಿಳಿಸಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರು. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಯುವತಿ ಮೃತಪಟ್ಟಿದ್ದಾರೆಂದು ತಿಳಿಸಿದರೆನ್ನಲಾಗಿದೆ.
ಇವರು ಸುಳ್ಯ, ಬೆಟ್ಟಂಪಾಡಿ, ಜಟ್ಟಿಪಳ್ಳ ಮುಂತಾದ ಕಡೆಗಳಲ್ಲಿ ಈ ಹಿಂದೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಕಳೆದ ವರ್ಷವಷ್ಟೇ ಕಾಸರಗೋಡು ಮಂಙಪಾರೆಯ ಯುವಕನೊಂದಿಗೆ ವಿವಾಹ ಮಾಡಿಕೊಡಲಾಗಿದ್ದು, ಪತಿ ವಿದೇಶದಲ್ಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!