Ad Widget

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಸತೀಶ್ ಕೊಯಿಂಗಾಜೆ

ಸುಳ್ಯದ ಕೊಡಿಯಾಲಬೈಲ್‌ನ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಸತೀಶ್ ಕುಮಾರ್ ಕೊಯಿಂಗಾಜೆ ಅಧಿಕಾರ ವಹಿಸಿಕೊಂಡಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾಗಿದ್ದ ಅಚ್ಚುತ ಪೂಜಾರಿ ಅವರಿಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಸತೀಶ್ ಕೊಯಿಂಗಾಜೆಯವರು ಪ್ರಭಾರ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಳೆದ 9 ವರ್ಷಗಳಿಂದ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಎಂಪಿಎಡ್ ಎಂಫಿಲ್ ಪದವೀಧರರಾಗಿರುವ ಸತೀಶ್ ಕುಮಾರ್ ಅವರು ಈ ಹಿಂದೆ ಕೋಟ ಸರಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ ನೆಹರೂ ಸ್ಮಾರಕ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಸುಳ್ಯ ತಾಲೂಕಿನ ಕೋಲ್ಚಾರ್ ಕೊಯಿಂಗಾಜೆ ಮನೆತನದವರು. ಪತ್ನಿ ವೀಣಾ ಅವರು ತಾಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!