Ad Widget

ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಆರಂಭೋತ್ಸವ ಕಾರ್ಯಕ್ರಮ

ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು, ಹೈಸ್ಕೂಲ್ ವಿಭಾಗ ಇಲ್ಲಿ ಇಂದು 2022-23ನೇ ಶೈಕ್ಷಣಿಕ ಸಾಲಿನ ಶಾಲಾ ಆರಂಭೋತ್ಸವ ಕಾರ್ಯಕ್ರಮ ನಡೆಯಿತು. ಮೊದಲಿಗೆ ಮಕ್ಕಳ ಪಥಸಂಚಲನ ನಡೆಯಿತು. ಈ ಕಾರ್ಯಕ್ರಮವನ್ನು ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಎರ್ಧಡ್ಕ ರವರು ಬ್ಯಾಂಡ್ ಬಾರಿಸುವ ಮೂಲಕ ಉದ್ಘಾಟಿಸಿದರು.

ನಂತರ ಸಭಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಚೆನ್ನಮ್ಮ ಇವರು ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು. ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಾರಾದ ನೆಲ್ಸನ್ ಕ್ಯಾಸ್ಥಿಲಿನೋ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇವತಿ ಅಚಳ್ಳಿ, ಸದಸ್ಯರಾದ ಮಂಜುಳಾ ಮುತ್ಲಾಜೆ,ಎಸ್.ಡಿ.ಯಂ.ಸಿ ಅಧ್ಯಕ್ಷರಾದ ಲೋಕೇಶ್ವರ.ಡಿ.ಆರ್, ಸದಸ್ಯರಾದ ಶ್ರೀನಿವಾಸ, ಶಾಲಾ ಶಿಕ್ಷಕ ವೃಂದ, ಕಾಲೇಜು ಉಪನ್ಯಾಸಕ ವೃಂದ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಮಾಜ ವಿಜ್ಞಾನ ಶಿಕ್ಷಕರಾದ ಸುನಿಲ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಗೋಪಾಲ ಏನೆಕಲ್ಲು ವಂದನೆಗೈದರು. ವಿಜ್ಞಾನ ಶಿಕ್ಷಕಿ ಕವಿತಾ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!