Ad Widget

ನಡುಗಲ್ಲು :- ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ

ನಾಲ್ಕೂರು ಗ್ರಾಮದ ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ.16 ರಂದು ಶಾಲಾ ಪ್ರಾರಂಭೋತ್ಸವ(ಕಲಿಕಾ ಚೇತರಿಕಾ ವರ್ಷ 2022-23) ನಡೆಯಿತು.
ಪ್ರಾರಂಭೋತ್ಸವದ ಅಂಗವಾಗಿ ಮೆರವಣಿಗೆ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯಕುಮಾರ್ ಚಾರ್ಮತ ಬ್ಯಾಂಡ್ ಬಾರಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯ ನಂತರ ಶಾಲೆಯಲ್ಲಿ ಸಮಾರಂಭ ನಡೆಯಿತು. ವಿಜಯಕುಮಾರ್ ಚಾರ್ಮತ ಅವರು ದೀಪ ಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಉಮೇಶ್ವರಿ ನೆಲ್ಲಿಪುಣಿ, ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪಾರೆಪ್ಪಾಡಿ, ಸಹ ಶಿಕ್ಷಕರುಗಳಾದ ಕುಶಾಲಪ್ಪ ತುಂಬತ್ತಾಜೆ, ಸುಧಾರಾಣಿ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸರ್ವ ಸದಸ್ಯರುಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹಾಗೂ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆಟ ಆಡಿಸುವ ಮೂಲಕ 14 ದಿನಗಳ ಕಾಲ ನಡೆಯುವಂತಹ ಮಳೆಬಿಲ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!