
ವಳಲಂಬೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಹಾಗೂ ಕಲಿಕಾ ಚೇತರಿಕೆ ಕಾರ್ಯಕ್ರಮ ಇಂದು ನಡೆಯಿತು. ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟ್ ವಳಲಂಬೆ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ರವೀಶ್ ಕುಮಾರ್ ಮೊಟ್ಟೆಮನೆ, ಉಪಾಧ್ಯಕ್ಷೆ ಅಭಿಲಾಷಾ ಮೋಟ್ನೂರು ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಪ್ರಮಿಳಾ ಪಿ ಎಸ್, ಎಸ್.ಡಿ.ಎಂ.ಸಿ. ಸದಸ್ಯರು ಪೋಷಕರು ವಿದ್ಯಾರ್ಥಿಗಳು ಹಾಗೂ ಶಿಕ್ಷಕವೃಂದದವರು ಉಪಸ್ಥಿತರಿದ್ದರು.