Ad Widget

ಬಾಳಿಲದ ವಿದ್ಯಾಬೋಧಿನೀ ಪ್ರೌಢಶಾಲಾ ನೂತನ ಶೈಕ್ಷಣಿಕ ವರ್ಷದ ತರಗತಿಗಳ ಆರಂಭ

ಬಾಳಿಲದ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ 2022 -2023ನೇ ಸಾಲಿನ ಶೈಕ್ಷಣಿಕ ವರ್ಷದ ತರಗತಿಗಳ ಆರಂಭ ಇಂದು ವಿದ್ಯುಕ್ತವಾಗಿ ಜರುಗಿತು. ಸಂಸ್ಥಾಪಕರಾದ ಪೂಜ್ಯನೀಯ ನೆಟ್ಟಾರು ವೆಂಕಟಸುಬ್ಬರಾವ್ ಅವರ ಭಾವಚಿತ್ರಕ್ಕೆ ಆಡಳಿತ ಮಂಡಳಿ ಸದಸ್ಯರು, ಅಧ್ಯಾಪಕ ವೃಂದ, ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪುಷ್ಪ ನಮನ ಸಲ್ಲಿಸಿದರು.

. . . . . . . . .

ವಿದ್ಯಾರ್ಥಿಗಳನ್ನು ಸಿಹಿತಿಂಡಿ ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಲಾ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್, ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಎನ್ ವೆಂಕಟ್ರಮಣ ಭಟ್, ಕೋಶಾಧಿಕಾರಿ ಯು.ರಾಧಾಕೃಷ್ಣ ರಾವ್ ರವರು ಶುಭ ಹಾರೈಸಿ, ಸಂದರ್ಭೋಚಿತವಾಗಿ ಮಾತನಾಡಿದರು. ಮುಖ್ಯ ಗುರುಗಳಾದ ಯಶೋಧರ ಎನ್ ಎಲ್ಲರನ್ನೂ ಸ್ವಾಗತಿಸಿದರು. ಸಹ ಶಿಕ್ಷಕರಾದ ಉದಯಕುಮಾರ್ ರೈ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಉಪಾಧ್ಯಕ್ಷರಾದ ಎಂ ಸುಬ್ರಹ್ಮಣ್ಯ ಮುಂಡುಗಾರು ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading