Ad Widget

ಐನೆಕಿದು : ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐನೆಕಿದುವಿನಲ್ಲಿ ಮೇ.16 ರಂದು ಶಾಲಾ ಪ್ರಾರಂಭೋತ್ಸವ(ಕಲಿಕಾ ಚೇತರಿಕಾ ವರ್ಷ 2022-23) ನಡೆಯಿತು.
ಪ್ರಾರಂಭೋತ್ಸವದ ಅಂಗವಾಗಿ ಶಾಲೆಯನ್ನು ತೋರಣಗಳಿಂದ ಸಿಂಗರಿಸಲಾಗಿತ್ತು ಹಾಗೂ ಮೆರವಣಿಗೆ ನಡೆಯಿತು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ವೇದಾವತಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರುಗಳಾದ ಗಿರೀಶ್ ಆಚಾರ್ಯ ಪೈಲಾಜೆ, ಶ್ರೀಮತಿ ಭಾರತಿ ಮೂಕಮಲೆ, ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಸರಿತಾ, ಸಿ.ಆರ್.ಪಿ ಸಹ ಶಿಕ್ಷಕಿ ಶ್ರೀಮತಿ ಕುಮಾರಿ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯರಾದ ಕಿಶೋರ್ ಕುಮಾರ್ ಕೂಜುಗೋಡು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪೋಷಕರು, ಎಸ್.ಡಿ.ಎಂ.ಸಿ ಸದಸ್ಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ 14 ದಿನಗಳ ಕಾಲ ನಡೆಯುವಂತಹ ಮಳೆಬಿಲ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!