Ad Widget

ಸಂಪಾಜೆ : ಉಚಿತ ಆರೋಗ್ಯ ತಪಾಸಣೆ

ಕಾರ್ಮಿಕ ಇಲಾಖೆಯ ಮೂಲಕ ಕಟ್ಟಡ ಇತರೆ ನಿರ್ಮಾಣ ಕಲ್ಯಾಣ ಮಂಡಳಿ ವತಿಯಿಂದ ನಡೆಸಲಾಗುತ್ತಿರುವ ತರಬೇತಿ ಹಾಗೂ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಇಂದು ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ನಡೆಯಿತು. ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ್ ಕೊಯಿಂಗಾಜೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಪಂಚಾಯತ್ ಸದಸ್ಯರುಗಳಾದ ಜಗದೀಶ್ ರೈ, ಸುಂದರಿ ಮುಂಡಡ್ಕ, ವಿಮಲಾ ಪ್ರಸಾದ್, ಸವಾದ್, ಎಸ್. ಕೆ. ಹನೀಫ್, ಅನುಪಮಾ,ಕಾರ್ಮಿಕ ಘಟಕದ ಪ್ರಸಾದ್, ಶ್ರೀಧರ್,ವಿಜಯ ಅಲಡ್ಕ, ಸುಶೀಲಾ, ಅರೋಗ್ಯ ಇಲಾಖೆಯವರು ಉಪಸ್ಥಿತರಿದ್ದರು. ನೂರಾರು ಜನ ಯೋಜನೆಯ ಸದುಪಯೋಗ ಪಡೆದುಕೊಂಡರು. ಯೋಜನೆಯ ಬಗ್ಗೆ ಸುಬ್ರಮಣಿ ಮಾಹಿತಿಯನ್ನು ನೀಡಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!