
ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಸುಳ್ಯ ಮಂಡಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವುಗಳ ಸಹಯೋಗದೊಂದಿಗೆ ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆದ ಕೇಂದ್ರ ಸರಕಾರದ ಬೆಳೆ ವಿಮೆ ಮತ್ತು ಕಿಸಾನ್ ಸಮ್ಮಾನ್ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮ ಇಂದು ನಡೆಯಿತು. ಇದರ ಉದ್ಘಾಟನೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ರವರು ನೆರವೇರಿಸಿ ಮಾತನಾಡಿದರು. ರಾಜ್ಯ ಮತ್ತು ಕೇಂದ್ರ ಸರಕಾರ ರೈತರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಈ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಕರೆಕೊಟ್ಟರು. ಕಾರ್ಯಕ್ರಮದಲ್ಲಿ ಸಂಪನ್ಮೂಲಗಳ ವ್ಯಕ್ತಿಯಾಗಿ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಬಿ.ಜೆ.ಪಿ. ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಭೋದ್ ಶೆಟ್ಟಿ ಮೇನಾಲ, ಸುಳ್ಯ ಮಂಡಲ ರೈತ ಮೋರ್ಚಾ ಅಧ್ಯಕ್ಷರಾದ ರಮೇಶ್ ಕಲ್ಪುರೆ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು, ದ.ಕ. ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.