ನಾಳೆ ಮಧ್ಯಾಹ್ನ 12.30ಕ್ಕೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್.ಎಂ.ಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈ ಕುರಿತು ಮಾಹಿತಿ ಬಿಡುಗಡೆ ಮಾಡಿದ್ದು, ಮೇ.19ರಂದು ಮಧ್ಯಾಹ್ನ 12.30ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ( SSLC Results ) ಮಲ್ಲೇಶ್ವರಂನಲ್ಲಿರುವಂತ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಣೆ ಮಾಡಲಿದ್ದಾರೆ
ಕರ್ನಾಟಕ ಎಸ್‌ಎಸ್‌ಎಲ್ಸಿ ಫಲಿತಾಂಶ 2022 ಮೇ.19ರ ಮಧ್ಯಾಹ್ನ 1 ಗಂಟೆಯ ನಂತ್ರ, ಫಲಿತಾಂಶವನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ karresults.nic.in ಮತ್ತು sslc.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.