ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್ ಮಂಗಳೂರು ದ.ಕ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಯುವಜನ ಸಂಯುಕ್ತ ಮಂಡಳಿ ಸುಳ್ಯ ತಾಲೂಕು, ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಹಾಗೂ ಸ್ಥಳೀಯ ಸರಕಾರ ಸರಕಾರೇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜೂ.01 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪೂರ್ವಾಹ್ನ 10:00 ಗಂಟೆಯಿಂದ ಅಪರಾಹ್ನ 4:00 ಗಂಟೆಯವರೆಗೆ ಭಾರತ ಸರ್ಕಾರದ ಮಾನ್ಯತೆ ಪಡೆದ ಹೆಚ್.ಎಲ್.ಎಲ್ ಲೈಫ್ ಕೇರ್ ಲಿಮಿಟೆಡ್ ಮಂಗಳೂರು ಇದರ ನುರಿತ ತಜ್ಞರ ಸಹಕಾರದಲ್ಲಿ ಕಾರ್ಮಿಕ ಇಲಾಖೆ ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ, ಇತರೆ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು, ಸದ್ರಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಾರ್ಮಿಕ ವರ್ಗದವರು ಹಾಗೂ ಇತರೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಶಿಬಿರಕ್ಕೆ ಆಗಮಿಸುವವರು ಕಾರ್ಮಿಕ ನೋಂದಣಿ ಕಾರ್ಡ್ ಮತ್ತು ಆಧಾರ್ ಕಾರ್ಡ್ ತೆಗೆದುಕೊಂಡು ಬರಬೇಕು ಎಂದು ತಿಳಿಸಲಾಗಿದೆ.
ವರದಿ :- ಉಲ್ಲಾಸ್ ಕಜ್ಜೋಡಿ