ಬಾಳುಗೋಡುವಿನಲ್ಲಿ ಜೂ.01 ರಂದು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉದ್ಘಾಟನೆಗೊಂಡಿತು.
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಙಣ ಅವರು ದೀಪ ಬೆಳಗಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಕಟ್ಟಡ ಮಾಲೀಕರಾದ ಲೋಕೇಶ್ ಕಟ್ಟೆಮನೆ, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ| ತ್ರಿಮೂರ್ತಿ, ಆರೋಗ್ಯ ನಿರೀಕ್ಷಕರಾದ ಬಸವರಾಜ್ ಚಕ್ರದ, ಸಮುದಾಯ ಆರೋಗ್ಯಾಧಿಕಾರಿ ರೇಖಾ, ಆಶಾ ಕಾರ್ಯಕರ್ತೆಯರು, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ