ಹರಿಹರ ಪಲ್ಲತ್ತಡ್ಕದಲ್ಲಿ ಜೂ.01 ರಂದು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉದ್ಘಾಟನೆಗೊಂಡಿತು.
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಙಣ ಅವರು ದೀಪ ಬೆಳಗಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಉದ್ಘಾಟಿಸಿದರು. ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ| ತ್ರಿಮೂರ್ತಿ, ಆರೋಗ್ಯ ನಿರೀಕ್ಷಕರಾದ ಬಸವರಾಜ್ ಚಕ್ರದ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ಸ್ಥಳೀಯ ವೈದ್ಯರುಗಳಾದ ಡಾ| ಚಂದ್ರಶೇಖರ ಕಿರಿಭಾಗ ಹಾಗೂ ಡಾ| ಗಿರೀಶ್, ಸಮುದಾಯ ಆರೋಗ್ಯಾಧಿಕಾರಿ ರೇಣುಕಾ, ಆಶಾ ಕಾರ್ಯಕರ್ತೆಯರು, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ