ಐನೆಕಿದುವಿನಲ್ಲಿ ಜೂ.03 ರಂದು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉದ್ಘಾಟನೆಗೊಂಡಿತು.
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತಾ ಗುಂಡಡ್ಕ ಅವರು ದೀಪ ಬೆಳಗಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ| ತ್ರಿಮೂರ್ತಿ, ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ಸ್ಥಳೀಯ ಸಹಕಾರಿ ಧುರೀಣರಾದ ಸೋಮಸುಂದರ ಗೌಡ ಕೂಜುಗೋಡು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸವಿತಾ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರುಗಳಾದ ಗಿರೀಶ್ ಆಚಾರ್ಯ ಪೈಲಾಜೆ, ಶ್ರೀಮತಿ ಭಾರತಿ ಮೂಕಮಲೆ, ಆಶಾಕಾರ್ಯಕರ್ತೆಯರು, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ