ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಗ್ರಾಮ ಪಂಚಾಯತ್ ಅಜ್ಜಾವರ ಹಾಗೂ ರೋಟರಿ ಕ್ಲಬ್ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಭಾರತ ಸರಕಾರದ ಮಾನ್ಯತೆ ಪಡೆದ HLL Life Care Ltd. ಮಂಗಳೂರು ಇದರ ನುರಿತ ತಜ್ಞರ ಸಹಕಾರದಲ್ಲಿ ಕಟ್ಟಡ ಕಾರ್ಮಿಕರಿಗೆ, ಇತರೇ ಕಾರ್ಮಿಕರಿಗೆ ಹಾಗೂ ಅವರನ್ನು ಅವಲಂಬಿತರಿಗೆ ಅಗತ್ಯವಾದ ಒಂದು ದಿನದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅಂಬೇಡ್ಕರ್ ಭವನ ಮೇನಾಲ, ಅಜ್ಜಾವರದಲ್ಲಿ ಆಯೋಜಿಸಲಾಗಿತ್ತು. ಶಿಬಿರವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಪ್ರಭಾಕರ್ ನಾಯರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸತ್ಯವತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ, ಶಿಬಿರದ ವೈದ್ಯಾಧಿಕಾರಿ ಡಾ. ಮಧುಶ್ರೀ, ಸುಳ್ಯ ರೋಟರಿ ಕ್ಲಬ್ ಕಾರ್ಯದರ್ಶಿ ರೊ. ಆನಂದ ಖಂಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ರೆಡ್ ಕ್ರಾಸ್ ಸದಸ್ಯರಾದ ಲಿಮಿತಾ ಪಿ ಜೆ, ಕೃತಿಕಾ ಬಿ, ಪುನೀತಾ ಕೆ ಸಿ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಶ್ರೀಮತಿ ಮಮತಾ ಕೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಧುರ ಎಂ. ಆರ್ ವಂದಿಸಿದರು. ಐಕ್ಯೂಎಸಿ ಸಹ ಸಂಯೋಜಕರಾದ ಶ್ರೀಧರ್ ವಿ, ಶ್ರೀಮತಿ ಭವ್ಯಾ ಪಿ ಎಂ, ಶ್ರೀಮತಿ ಅನಂತಲಕ್ಷ್ಮಿ ಸಹಕರಿಸಿದರು. ಸುಮಾರು 85 ಫಲಾನುಭವಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.
- Saturday
- November 23rd, 2024