Ad Widget

ಬೆಳ್ಳಾರೆ : ಸಚಿವರಿಂದ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಉದ್ಘಾಟನೆ

ಸೇವಾ ಭಾರತಿ ಬೆಳ್ಳಾರೆ, ಗ್ರಾಮ ವಿಕಾಸ ಸಮಿತಿ ಬೆಳ್ಳಾರೆ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ.ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರಿಂದ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯುವ ಬೃಹತ್ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಮತ್ತು ರಕ್ತ ವರ್ಗೀಕರಣ ಶಿಬಿರ ಹಾಗೂ ಭೂಮಿ ಫಲವತ್ತತೆ ಹೆಚ್ಚಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಉದ್ಘಾಟಿಸಿದರು. ಕಾರ್ಯಕ್ರಮ ದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹಸೇವಾ ಪ್ರಮುಖ್ ನಾ.ಸೀತಾರಾಮ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಬೆಳ್ಳಾರೆ ಗ್ರಾಮ ಸ್ವರಾಜ್ಯ ತಂಡದ ಆರ್.ಕೆ‌. ಭಟ್ ಕುರುಂಬುಡೇಲು, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ , ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ|ಮುರಲಿಮೋಹನ ಚೂಂತಾರು, ಕುಂಬಾರರ ಗುಡಿ ಕೈಗಾರಿಕಾ ಸ.ಸಂಘ.ನಿ.ಪುತ್ತೂರು ಇದರ ಅಧ್ಯಕ್ಷರಾದ ಭಾಸ್ಕರ ಎಂ. ಪೆರುವಾಯಿ, ಪ್ರಮುಖರಾದ ಶ್ರೀನಾಥ್ ರೈ ಬಾಳಿಲ, ಪದ್ಮನಾಭ ಶೆಟ್ಟಿ ಪೆರುವಾಜೆ, ಪ್ರೇಮಚಂದ್ರ ಬೆಳ್ಳಾರೆ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!