
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಯಶಸ್ವಿಯಾಗಿ 8 ವರ್ಷಗಳ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಬೈಕ್ ರ‍್ಯಾಲಿ ಇಂದು ನಡೆಯಿತು. ಬೈಕ್ ರ‍್ಯಾಲಿಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಬೆಳ್ಳಾರೆಯ ಲಕ್ಷ್ಮೀ ವೆಂಕಟರಮಣ ದೇವಾಲಯದ ಬಳಿ ತೆಂಗಿನಕಾಯಿ ಒಡೆದು ಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಬೋಧ್ ಶೆಟ್ಟಿ ಮೆನಾಲ, ಸುಳ್ಯ ಯುವಮೋರ್ಚಾ ಅಧ್ಯಕ್ಷರಾದ ಕೃಷ್ಣ ಎಂ.ಆರ್., ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಹಾಗೂ ಮನುದೇವ್ ಪರಮಲೆ, ಪ್ರಶಿಕ್ಷಣ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾದ ಕೃಷ್ಣ ಶೆಟ್ಟಿ ಕಡಬ, ದ.ಕ.ಜಿಲ್ಲಾ ಜೇನು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಚಂದ್ರ ಕೋಲ್ಚಾರು, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಭಾಗೀರಥಿ ಮುರುಳ್ಯ, ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶುಭದಾ ಎಸ್.ರೈ, ಪ್ರಮುಖರಾದ ಶ್ರೀನಾಥ್ ಬಾಳಿಲ, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.