ಸಾಹಿತಿ, ಜಾನಪದ ಸಂಶೋಧಕ ಡಾ.ಸುಂದರ ಕೇನಾಜೆಯವರು ಇತರ ಲೇಖಕರೊಂದಿಗೆ ಸೇರಿ ರಚಿಸಿದ ಮಂಟೇಸ್ವಾಮಿ ಪರಂಪರೆಯ ನೀಲಗಾರರ ಆತ್ಮಕಥೆಗಳ ಗ್ರಂಥ “ನಾವು ಕೂಗುವ ಕೂಗು” ಜೂ 15 ರಂದು ಡಾ.ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ ಚಾಮರಾಜನಗರ ಇಲ್ಲಿ ಬಿಡುಗಡೆಗೊಂಡಿತು.
ಕೇಂದ್ರದ ಶ್ರೀ ಮಂಟೇಸ್ವಾಮಿ, ರಾಚಪ್ಪಾಜಿ, ಸಿದ್ದಪ್ಪಾಜಿ ಅಧ್ಯಯನ ಪೀಠದ ಆಶ್ರಯದಲ್ಲಿ ನಡೆದ ಈ ಬಿಡುಗಡೆ ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರು ಗ್ರಂಥ ಬಿಡುಗಡೆಗೊಳಿಸಿ ಈ ಗ್ರಂಥ ರಚನೆಯ ಹಿಂದಿನ ಮತ್ತು ಇಂದಿನ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಹೇಮಂತ ಕುಮಾರ್ ವಹಿಸಿ ಈ ಗ್ರಂಥ ಜಾನಪದ ಅಧ್ಯಯನ ಕ್ಷೇತ್ರದಲ್ಲೇ ಮಹತ್ವಪೂರ್ಣವಾದುದು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಮೈಸೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಡಾ.ಸಂಗೀತ ಗಜಾನನ ಭಟ್, ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಪ್ರದೀಪ್ ಕುಮಾರ್ ದೀಕ್ಷಿತ್, ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ.ವಿಜಯ ಕುಮಾರಿ ಕರಿಕಲ್, ಮಂಟೇಸ್ವಾಮಿ ಅಧ್ಯಯನ ಪೀಠದ ಸಂದರ್ಶನ ಪ್ರಾಧ್ಯಾಪಕ ಹಾಗೂ ಗ್ರಂಥದ ಸಂಪಾದಕ ಪ್ರೊ.ಕೃಷ್ಣಮೂರ್ತಿ ಹನೂರು, ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ.ಆರ್ ಶಿವಪ್ಪ ಕೇಂದ್ರದ ನಿರ್ದೇಶಕರಾದ ಪ್ರೊ.ಆರ್ ಮಹೇಶ್ ಹಾಗೂ ಗ್ರಂಥದ ಲೇಖಕರು ಹಾಗೂ ಕಲಾವಿದರು ಉಪಸ್ಥಿತರಿದ್ದರು.
ನೀಲಗಾರ ಪರಂಪರೆಯ ಐವರು ಖ್ಯಾತ ಕಲಾವಿದರ ಆತ್ಮಕಥೆಯನ್ನು ಐವರು ಲೇಖಕರು ಸೇರಿ ಸುತ್ತೂರಿನಲ್ಲಿ ನಡೆದ ವಿಶೇಷ ಕಾರ್ಯಾಗಾರದಲ್ಲಿ ಸಂಗ್ರಹಿಸಿ ಬರೆದಿದ್ದರು. ವಿಶ್ವವಿದ್ಯಾಲಯದ ಪ್ರಸಾರಾಂಗದ ಮೂಲಕ ಈ ಗ್ರಂಥವನ್ನು ರಚಿಸಿ ಪ್ರಕಟಿಸಲಾಗಿದೆ. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಅಧ್ಯಯನ ಪೀಠದ ವತಿಯಿಂದ ಕಲಾವಿದರನ್ನು ಮತ್ತು ಲೇಖಕರನ್ನು ಗೌರವಿಸಲಾಯಿತು.
- Thursday
- November 21st, 2024