Ad Widget

ವಿಶ್ವ ಯೋಗ ದಿನದ ಅಂಗವಾಗಿ ಅಯ್ಯನಕಟ್ಟೆ ಬಸ್ಸು ತಂಗುದಾಣದ ಸ್ವಚ್ಚತೆ ಕಾರ್ಯಕ್ರಮ

ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಅಯ್ಯನಕಟ್ಟೆ ಬಸ್ಸು ತಂಗುದಾಣದ ಸ್ವಚ್ಚತೆಯನ್ನು ಇಂದು ಮಾಡಲಾಯಿತು. ಈ ಸಂದರ್ಭದಲ್ಲಿ ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಕಿಲಂಗೋಡಿ, ಉಪಾಧ್ಯಕ್ಷ ಗಣೇಶ್ ರೈ, ಸದಸ್ಯ ಬಾಲಕೃಷ್ಣ ಬೇರಿಕೆ, ಅರುಣ್ ರೈ, ಸತೀಶ್ಚಂದ್ರ ಅಯ್ಯನಕಟ್ಟೆ ಮತ್ತು ಶಾಂತಮೂರ್ತಿ ಕಿಲಂಗೋಡಿ ಉಪಸ್ಥಿತರಿದ್ದರು.

ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ಯೋಗ ದಿನಾಚರಣೆ

ಕಡಬ ತಾಲೂಕಿನ ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಸಹಶಿಕ್ಷಕರಾದ ಗುರುಪ್ರಸಾದ್ ಭಟ್ ಯೋಗ ದಿನಾಚರಣೆಯ ಮಹತ್ವದ ಕುರಿತಾಗಿ ಮಾತನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕರಾದ ಪ್ರಶಾಂತ್.ಬಿ ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹ ಶಿಕ್ಷಕರಾದ ವಿನೋದ್ ಕುಮಾರ್ ನಿರೂಪಿಸಿ, ಉಮೇಶ್ ವಂದಿಸಿದರು.
Ad Widget

ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ಪ್ರವೇಶೋತ್ಸವ ಕಾರ್ಯಕ್ರಮ

ಕಡಬ ತಾಲೂಕಿನ ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ನೂತನ ಶೈಕ್ಷಣಿಕ ವರ್ಷಕ್ಕೆ ದಾಖಲಾತಿಗೊಂಡ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಗುರುಗಳಾದ ಯಶವಂತ ರೈ , ಪ್ರೌಢ ಶಾಲೆಯ ಮುಖ್ಯಗುರುಗಳಾದ ಗಣಪತಿ ಭಟ್ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯದ ಮುಖ್ಯಗುರುಗಳಾದ ಪ್ರಶಾಂತ್ , ಬಿ.,...

ಸುಬ್ರಹ್ಮಣ್ಯ :- ಕೆ.ಎಸ್.ಎಸ್ ಕಾಲೇಜಿನಲ್ಲಿ ಯೋಗ ದಿನಾಚರಣೆ

ಯೋಗವು ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ. ಇದು ಮನಸ್ಸು ಮತ್ತು ದೇಹದ ಏಕತೆಯನ್ನು ಸಾರುತ್ತದೆ. ಯೋಗ ಸಾಧನೆಯ ಪ್ರಾಮುಖ್ಯತೆಯನ್ನು ತಿಳಿಯಪಡಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸಲು ಕೆ.ಎಸ್.ಎಸ್ ಕಾಲೇಜು ಸುಬ್ರಹ್ಮಣ್ಯ, ಐ.ಕ್ಯೂ.ಎ.ಸಿ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಶ್ರೀ ಪತಂಜಲಿ ಯೋಗ...

ಐವರ್ನಾಡು ; ವಿಶ್ವ ಯೋಗ ದಿನಾಚರಣೆ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ವಿಕಾಸ ಸಭಾ ಭವನದಲ್ಲಿ “ ಮಾನವೀಯತೆಗಾಗಿ ಯೋಗ” ಎಂಬ ಧ್ಯೇಯವಾಕ್ಯದಡಿಯಲ್ಲಿ 8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಯೋಗ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ಳಾರೆ ಪತಂಜಲಿ ಯೋಗ ಸಮಿತಿಯ ಗಣಪಯ್ಯ ಭಟ್ ವನಶ್ರೀ ಇವರು ಭಾಗವಹಿಸಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗ ತರಬೇತಿ ನೀಡಿದರು....

ಅಚ್ರಪ್ಪಾಡಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಅಚ್ರಪ್ಪಾಡಿ ಸ.ಕಿ ಪ್ರಾ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀಮತಿ. ಶಶಿಕಲಾ ಕೃಷ್ಣ (ಶಾಲೆಯ ಮುಖ್ಯಶಿಕ್ಷಕರ ತಾಯಿ) ಇವರು ಯೋಗ ದಿನಾಚರಣೆ ಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಸರಳ ಯೋಗ ಹಾಗೂ ಪ್ರಾಣಾಯಾಮಗಳನ್ನು ಮಕ್ಕಳಿಗೆ ಮಾಡಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ತಾಯಂದಿರ ಸಮಿತಿ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪರಶುರಾಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಲಾ...

ಬುಶ್ರಾ ವಿದ್ಯಾಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಬುಶ್ರಾ ವಿದ್ಯಾಸಂಸ್ಥೆ ಕಾವು ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ್ದು ,ಬುಶ್ರಾ ವಿದ್ಯಾ ಸಂಸ್ಥೆಯ ಸ್ಥಾಪಕಧ್ಯಕ್ಷರೂ ಸಂಚಾಲಕರೂ ಆದ ಅಬ್ದುಲ್ ಅಝೀಝ್ ಬುಶ್ರಾ ವಿದ್ಯುಕ್ತವಾಗಿ ಉದ್ಘಾಟಿಸಿ,ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು .ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ್ ಹಾಗೂ ಶಿಕ್ಷಕ ಪ್ರದೀಪ್ ವಿದ್ಯಾರ್ಥಿ ಗಳಿಗೆ ತರಬೇತಿಯನ್ನು ನೀಡಿದರು.ಶಾಲಾ ಮುಖ್ಯ ಗುರುಗಳಾದ ಅಮರನಾಥ್ ಪ್ರಾಸ್ತಾವಿಕ ಮಾತುಗಳನ್ನಾಡಿ ,ಯೋಗ ದಿನಾಚರಣೆಯ...

ಚಿತ್ತ ಚಾಂಚಲ್ಯ ಹೋಗಲಾಡಿಸಿ ಏಕಾಗ್ರತೆ ಸಾಧಿಸಲು ಯೋಗ ಅಡಿಗಲ್ಲು – ಗಿರೀಶ್ ನಂದನ್

ಚಿತ್ತ ಚಾಂಚಲ್ಯವನ್ನು ಹೋಗಲಾಡಿಸಲು ಯೋಗ ಪ್ರಧಾನ. ಪ್ರಾಚೀನ ಖುಷಿ ಮುನಿಗಳಿಂದ ಸಂಜಾತ ಯೋಗವು ಸರ್ವರೋಗ ನಿವಾರಕವಾಗಿದೆ. ಪತಂಜಲಿ ಮುನಿಯಿಂದ ಭಾರತದಲ್ಲಿ ಆರಂಭವಾದ ಯೋಗ ಇಂದು ವಿಶ್ವವ್ಯಾಪಿಯಾಗಿದೆ.ವಿಶ್ವ ಇದನ್ನು ಅನುಸರಿಸುತ್ತಿದೆ.ದೇವತೆಯ ಆರಾಧನೆಗೆ ಯೋಗಾಸನವನ್ನು ಬಳಸಲಾಗುತ್ತದೆ. ಸೂರ್ಯನ ಪೂಜನೆಮಾಡುವ ಸೂರ್ಯ ನಮಸ್ಕಾರ ಅತ್ಯಂತ ಶ್ರೇಷ್ಠವಾದ ಆಸನವಾಗಿದೆ. ಯೋಗವು ಭಾರತವು ವಿಶ್ವಕ್ಕೆ ನೀಡಿದ ದೊಡ್ಡ ಕೊಡುಗೆಯಾಗಿದೆ. ಇದೀಗ ವಿಶ್ವಾದ್ಯಂತ ಯೋಗದ...

ನಡುಗಲ್ಲು ಶಾಲೆಯಲ್ಲಿ ಯೋಗ ದಿನಾಚರಣೆ

ನಡುಗಲ್ಲು ಸ.ಹಿ.ಪ್ರಾ. ಶಾಲೆಯಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಶಿಕ್ಷಕರು, ಶಾಲಾ ಮಕ್ಕಳು ಉತ್ಸಾಹದಿಂದ ಭಾಗವಹಿಸಿದರು.

ಹರಿಹರ ಪಲ್ಲತ್ತಡ್ಕ :- ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಜೂ.21 ರಂದು ಯೋಗ ದಿನಾಚರಣೆ ಆಚರಿಸಲಾಯಿತು.ಈ ಸಂದರ್ಭದಲ್ಲಿ ಪ್ರೌಢಶಾಲಾ ಶಿಕ್ಷಕರುಗಳಾದ ಕೃಪಾ.ಪಿ.ಎಸ್, ಮೇದಪ್ಪ.ಎ, ವೆಂಕಟೇಶ್ ನಾಯಕ್, ವನಿತಾ.ಜಿ, ವೀಣಾ.ಎ, ಜಯಶ್ರೀ, ಸೌಮ್ಯ ಕೋನಡ್ಕ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
Loading posts...

All posts loaded

No more posts

error: Content is protected !!